ಆರ್.ಬಿ.ತಿಮ್ಮಾಪುರಗೆ ಕಾಂಗ್ರೆಸ್ ಹೈ ಕಮಾಂಡ್ ಸಿಎಂ ಸ್ಥಾನ ನೀಡಲಿ: ಡಿ.ಎಸ್.ಮಾಳಗಿ

Date:

ಹಾವೇರಿ; ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಯಯ್ಯ ಅವರ ಬದಲಾವಣೆಯ ಬಗ್ಗೆ ಸಚಿವರು, ಶಾಸಕರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಪ್ರಾಸಿಕ್ಯೂಶನ್ ವಿಚಾರದಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿದರೇ ಮಾದಿಗ ಸಮಾಜದ ಮುಖಂಡರು ಹಾಗೂ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಬೇಕು ಎಂದು ಮಾದಿಗ ಸಮಾಜದ ಮುಖಂಡ, ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್.ಬಿ. ತಿಮ್ಮಾಪುರ ದಲಿತ ಮಾದಿಗ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಸಂಪುಟದಲ್ಲಿ ಯಶಸ್ವಿಯಾಗಿ ಖಾತೆಗಳನ್ನು ನಿಭಾಯಿಸಿದ್ದಾರೆ. ಸಾಮಾಜಿಕ ಬದ್ಧತೆ ಇರುವ ನಾಯಕರಾಗಿದ್ದು ಅವರಿಗೆ ಸಿಎಂ ಸ್ಥಾನ ನೀಡುವ ಮೂಲಕ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡುವಲ್ಲಿ ನಿರ್ಲಕ್ಷ್ಯ ಧೋರಣೆ ಮಾಡದೇ ದಲಿತ ಮಾದಿಗ ಸಮಾಜದ ಬಗ್ಗೆ ತನಗಿರುವ ನೈಜ ಕಾಳಜಿಯನ್ನು ಕಾಂಗ್ರೆಸ್ ಮುಖಂಡರು ತೋರಬೇಕೆಂದು ಅವರು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಒಟ್ಟು ಜನ ಸಂಖ್ಯೆಯಲ್ಲಿ ಮಾದಿಗರು ೫೭.೨% ರಷ್ಟು ಬಹುದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಘೋರ ಅನ್ಯಾಯವಾಗಿದೆ. ಈ ಸಮಾಜಕ್ಕೆ ಸೇರಿದ ಆರ್.ಬಿ ತಿಮ್ಮಾಪುರ ಅವರು ೧೯೮೯ ರಿಂದ ೩ ಬಾರಿ ಶಾಸಕರಾಗಿದ್ದು, ೧ ಬಾರಿ ವಿಧಾನ ಪರಿಷತ್ ಸದಸ್ಯರಿದ್ದಾರೆ. ೬ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರ್.ಬಿ ತಿಮ್ಮಾಪುರ ಕಾನೂನು ಪದವಿ ಪಡೆದಿದ್ದಾರೆ. ಕರ್ನಾಟಕರಾಜ್ಯದಲ್ಲಿ ಮಾದಿಗ ಸಮಾಜದ ಹಿತ ಚಿಂತಕರಾಗಿದ್ದಾರೆ.
ಆರ್.ಬಿ ತಿಮ್ಮಾಪುರ ಅವರು ರಾಜ್ಯದ ಮಾದಿಗರನ್ನು ಹತ್ತಾರು ಲಕ್ಷ ಜನಸಂಖ್ಯೆಯಲ್ಲಿ ಹುಬ್ಬಳ್ಳಿಯಲ್ಲಿ ಸೇರಿಸಿ ಮಾದಿಗರ ಸಮಾವೇಶವನ್ನು ಆಯೋಜನೆ ಮಾಡಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಸಮಾವೇಶ ಉದ್ಘಾಟಿಸಿ, ಜನ ಸಾಗರವನ್ನು ನೋಡಿ ಸಂತೋಷ ಪಟ್ಟರು. ಆದರೆ ಸಮಾಜದ ಪ್ರಮುಖ ಬೇಡಿಕೆಯ ಬಗ್ಗೆ ಗಮನ ಹರಿಸಲೇ ಇಲ್ಲ.
ಕಾಂಗ್ರೆಸ್ ಪಕ್ಷವು ಈ ಹಿಂದೆ ಆನೇಕ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಈ ವರೆಗೆ ಮಾದಿಗ ಸಮಾಜಕ್ಕೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ವೇಳೆ ಅಧಿಕಾರ ತ್ಯಾಗ ಮಾಡುವ ಸಂದರ್ಭ ಎದುರಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದಲಿತ ಸಮುದಾಯಕ್ಕೆ ಸೇರಿದ ಆರ್.ಬಿ ತಿಮ್ಮಾಪುರ ಅವರನ್ನು ಆಯ್ಕೆ ಮಾಡಬೇಕು. ಕಳೆದ ೭೫ ವರ್ಷಗಳಿಂದ ದಲಿತರು ರಾಜ್ಯದಲ್ಲಿ ಮುಖ್ಯ ಮಂತ್ರಿಯಾಗಿರುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿದ್ದನ್ನು ನೆನಪಿಸಿಕೊಳ್ಳಬಹುದು. ಎಲ್ಲ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಆರ್.ಬಿ. ತಿಮ್ಮಾಪುರ ಅವರನ್ನು ಮುಖ್ಯ ಮಂತ್ರಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರನ್ನು ಕರ್ನಾಟಕ ರಾಜ್ಯದ ಮಾದಿಗ ಸಮಾಜದ ಪರವಾಗಿ ಒತ್ತಾಯ ಮಾಡಿರುವುದಾಗಿ ಎಸ್.ಮಾಳಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...