ಜು.೫ರಂದು ಹಾವೇರಿ, ಧಾರವಾಡ,ಗದಗ ಜಿಲ್ಲೆಗಳ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಹಾವೇರಿ: ೨೦೨೫-೨೬ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಹಾವೇರಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜು.೫ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಕರಿಗಾರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ತಾಲೂಕು ಯತ್ತಿನಹಳ್ಳಿ ಗ್ರಾಮದ ಹೊರವಲಯದಲ್ಲಿರುವ (ಗುತ್ತಲ ರಸ್ತೆ) ಸಾಯಿ ಪರಮೇಶ್ವರ ಸಭಾಂಗಣದಲ್ಲಿ ಜು.೫ರಂದು ಸಂಜೆ ೪ ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ಸುಮಾರು ೭೦೦ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದ್ದು, ಮೂರು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಲ್ಲ ಸರಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ವಿಧಾನಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸೆಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರವಿ ಡಿ. ಚನ್ನಣ್ಣನವರ ಪಾಲ್ಗೊಂಡು ಪ್ರೇರಣಾ ನುಡಿಗಳನ್ನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ, ಜಿಲ್ಲಾಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಓ ದಲ್ಜೀತ್ಕುಮಾರ, ಎಸ್ಪಿ ಯಶೋಧಾ ವಂಟಗೋಡಿ ಸೇರಿದಂತೆ ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿ ಪದಾಕಾರಿಗಳು, ಜಿಲ್ಲೆಯ ವಿವಿಧ ಶಾಸಕರು, ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಸರ್ವ ಸರಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸರ್ವೋತ್ತಮರಿಗೂ ಪುರಸ್ಕಾರ: ಹಾವೇರಿ ಜಿಲ್ಲೆಯಲ್ಲಿ ಉತ್ತಮ ನಾಗರೀಕ ಸೇವೆ ಸಲ್ಲಿಸುವ ಎ, ಬಿ ಹಾಗೂ ಡಿ ವರ್ಗದ ತಲಾ ೨, ಸಿ ವರ್ಗದ ೪ ಜನ ನೌಕರರು ಸೇರಿದಂತೆ ಒಟ್ಟು ೧೦ ಜನ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ನೌಕರರನ್ನು ಸಹ ಇದೇ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಲ್ಲೇಶಪ್ಪ ಕರಿಗಾರ ತಿಳಿಸಿದರು.
ಎನ್ಪಿಎಸ್ ರದ್ದತಿಗೆ ಒತ್ತಾಯ: ರಾಜ್ಯ ಸರಕಾರ ಎನ್ಪಿಎಸ್ ರದ್ದು ಮಾಡುವ ಕುರಿತು ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಇನ್ನೂ ಈಡೇರಿಸಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿ ಹಾಗೂ ಪ್ರಣಾಳಿಕೆ ಕಮೀಟಿ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ ಅವರಿಗೆ ಒತ್ತಾಯಿಸಲಾಗಿತ್ತು. ಇದೀಗ ಡಿ.ಕೆ. ಶಿವಕುಮಾರ ಅವರೇ ಮುಖ್ಯಮಂತ್ರಿಯಾಗಿದ್ದು, ಮುಂಬರುವ ಜು.೧೧ರಂದು ಬೆಂಗಳೂರಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘದಿಂದ ಸಿಎಂಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ. ಈ ಸಮಾರಂಭದಲ್ಲಿ ಎನ್ಪಿಎಸ್ ರದ್ಧತಿಗೆ ಒತ್ತಾಯಿಸಲಾಗುವುದು ಎಂದರು.
ಪ್ರತ್ಯೇಕ ಬಸ್ ವ್ಯವಸ್ಥೆ: ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಆಗಮಿಸುವ ನೌಕರರಿಗೆ ಪ್ರತ್ಯೇಕ ನಾಲ್ಕು ಬಸ್ ವ್ಯವಸ್ಥೆ ಮಾಡುವಂತೆ ಕೆಎಸ್ಆರ್ಟಿಸಿ ಡಿಸಿಯವರಿಗೆ ಮನವಿ ಮಾಡಿದ್ದು, ಅವರು ಸ್ಪಂದಿಸಿದ್ದಾರೆ. ಪ್ರತಿಭಾ ಪುರಸ್ಕಾರ ಎನ್ನುವ ಪೋಸ್ಟರ್ನ್ನು ಬಸ್ಸುಗಳಿಗೆ ಅಂಟಿಸಲಾಗುತ್ತದೆ. ಆ ಬಸ್ಸುಗಳಲ್ಲಿ ನೌಕರರು ಪ್ರಯಾಣಿಸಬಹುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಪಾಟೀಲ, ಖಜಾಂಚಿ ದಾವಲಸಾಬ ಕಮಗಾಲ, ರಾಜ್ಯ ಸಮಿತಿ ಸದಸ್ಯ ಮುನೀಶ್ವರ ಚೂರಿ ಇದ್ದರು.