ನೌಕರರು ಆರೋಗ್ಯ ಸಂಜೀವಿನಿ ಯೋಜನೆಯ ಪ್ರಯೋಜನ ಪಡೆಯಿರಿ: ಕರಿಗಾರ
ಹಾವೇರಿ: ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರಕಾರಿ ನೌಕರರು ಹಾಗೂ ಅವರ ಕುಟುಂಬದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.೧ರಿಂದಲೇ ಜಾರಿಗೊಳಿಸಲಾಗಿದೆ. ಪತಿ-ಪತ್ನಿ ಸರಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡಬೇಕು. ರಾಜ್ಯ ಸರಕಾರದ ಅಕಾರಿ ಅಥವಾ ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯದ ಮಿತಿಯನ್ನು ೧೭ ಸಾವಿರ ರೂ.ಗಳಿಂದ ೨೭ ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.೧೮ರೊಳಗೆ ಸಂಬಂಧಿಸಿದ ಡಿ.ಡಿ.ಓ ಗಳಿಗೆ ನೀಡಬೇಕು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರಕಾರದ ಅಧಿಕಾರಿ-ನೌಕರರು ಪ್ರತಿ ತಿಂಗಳು ಸರಕಾರ ನಿರ್ದಿಷ್ಠ ಪಡಿಸಿರುವ ವಂತಿಕೆಯನ್ನು ಅಕ್ಟೋಬರ್-೨೦೨೫ನೇ ಮಾಹೆಯಿಂದ ನೀಡಬೇಕು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೫.೨೫ ಲಕ್ಷ ಸರಕಾರಿ ನೌಕರರು ಹಾಗೂ ೨೫ ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ರಾಜ್ಯ ಸರಕಾರದ ಎಲ್ಲ ಅಕಾರಿ/ನೌಕರರು ಎಚ್ಆರ್ಎಂಎಸ್-೧ರಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಲಾಭವನ್ನು ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಪಡೆದುಕೊಳ್ಳಬೇಕು. ಯೋಜನೆ ಜಾರಿಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಮಲ್ಲೇಶ ಕರಿಗಾರ ಕೃತಜ್ಞತೆ ಸಲ್ಲಿಸಿದ್ದಾರೆ.