ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿರುವುದನ್ನು ವಿರೋಧಿಸಿ ಬಂಜಾರ ಸಮಾಜದಿಂದ ಪ್ರತಿಭಟನೆ
ಹಾವೇರಿ: ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿಯಲ್ಲಿ ದೋಷಗಳಿವೆ, ಬಂಜಾರ, ಬೋವಿ, ಕೊರಚ, ಕೊರಮ ಮತ್ತಿತರ ಸಮುದಾಯಗಳಿಗೆ ಅನ್ಯಾಯವಾಗಿದೆ. ಈ ವರದಿಯನ್ನು ಏಕಪಕ್ಷೀಯವಾಗಿ ಅಂಗೀಕರಿಸಬಾರದು, ಬಂಜಾರ ಸಮಾಜಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿರುವುದನ್ನು ವಿರೋಧಿಸಿ ಬಂಜಾರ ಸಮಾಜದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ.ವಜಯಮಹಾಮತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿಗೆ ಮನವಿ ಸಲ್ಲಿಸಿದರು.
ಒಳ ಮೀಸಲಾತಿಯಲ್ಲಿ ಬಲಗೈ, ಎಡಗೈ ಸಮುದಾಯಕ್ಕೆ ತಲಾ ಶೇ ೬ರಷ್ಟು ಮೀಸಲಾತಿ ನೀಡಲಾಗಿದೆ, ಇನ್ನುಳಿದ ೫೯ ಜಾತಿಗಳಿಗೆ ಕೇವಲ ಶೇ ೫ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಸಚಿವ ಸಂಪುಟದಲ್ಲಿ ಜಾರಿಮಾಡಿರುವ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು, ಈಗಾಗಲೇ ಸಾಮಾಜಿಕ ಅಸಮಾನತೆ, ಆರ್ಥಿಕ ಹಿಂಜರಿತ, ನಿರುದ್ಯೋಗದಿಂದ ಬಳಲುತ್ತಿರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಮಾರಕ ಪರಿಣಾಮ ಬೀರುತ್ತದೆ.
ಜನಸಂಖ್ಯೆಗನುಣವಾಗಿ ಜಾರಿಯಾಗಬೇಕಿದ್ದ ಒಳಮೀಸಲಾತಿಯನ್ನು ಪ್ರಭಾವಿಗಳ ಒತ್ತಡಕ್ಕೆ ಮಣಿದು ೬೩ ಜಾತಿಗಳನ್ನು ಸೇರಿಸಿ ಕೇವಲ ೫% ಮೀಸಲಾತಿ ನೀಡಿದ್ದು ಮಾತ್ರ ಈ ಸಮುದಾಯಗಳಿಗೆ ಮಾಡಿರುವಂತಹ ಘನಘೋರ ಅನ್ಯಾಯ ಜೊತೆಗೆ ಮರಣ ಶಾಸನವೂ ಕೂಡ. ಕರ್ನಾಟಕ ರಾಜ್ಯದಲ್ಲಿ ಬಂಜಾರ ಸಮುದಾಯವು ವಲಸೆ, ಅನಕ್ಷರತೆ, ಬಡತನ ಜೊತೆಗೆ ಈಗಲೂ ಕೂಡ ತಾಂಡಾಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಅತ್ಯಂತ ಹಿಂದುಳಿದಿದೆ. ಈ ಸಮುದಾಯದ ೯೦% ರಷ್ಟು ಜನ ದಿನಗೂಲಿ ನಂಬಿಕೊಂಡೆ ಜೀವನ ನಡೆಸುತ್ತಿದ್ದಾರೆ. ಎಷ್ಟೋ ಜನರು ಈಗಲೂ ಒಂದು ಹೊತ್ತಿನ ಊಟಕ್ಕೂ ಪರದಾಡುವ ಶೋಚನೀಯ ಸ್ಥಿತಿಯಿಂದ ಬಳಲುತ್ತಿದ್ದಾರೆ. ಇಂತಹ ಸಮಯದಲ್ಲಿ ೬೩ ಜಾತಿಗಳನ್ನು ಸೇರಿಸಿ ಕೇವಲ ೫% ಮೀಸಲಾತಿ ನೀಡಿದ್ದು ಮಾತ್ರ ಈ ಸಮುದಾಯಗಳ ಬದುಕಿನ ಮೇಲೆ ಬರೆ ಎಳೆದಂತಾಗಿದೆ. ಸಂಪುಟ ಒಪ್ಪಿರುವ ಈ ಒಳಮೀಸಲಾತಿಯನ್ನು ಮುಖ್ಯಮಂತ್ರಿ ಅವರು ಕೂಡಲೇ ವಾಪಸ್ ಪಡೆಯಬೇಕು. ಇಲ್ಲವಾದರೆ ಪ್ರತಿಭಟನೆ ತೀವುಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ಮನವಿ ಅರ್ಪಿಸುವ ಸಂದರ್ಭದಲ್ಲಿ ಮುಖಂಡರಾದ ಈರಪ್ಪ ಲಮಾಣಿ, ರಾಮಣ್ಣ ನಾಯಕ್, ಜಯರಾಮ್ ಮಾಳಪುರ್, ರಾಜೇಶ್ ಚೌವ್ಹಾಣ, ಚಂದ್ರಪ್ಪ ಲಮಾಣಿ, ತಿರಕಪ್ಪ ನಾಯಕ್, ಹೋಬ ನಾಯ್ಕ, ರಮೇಶ ಹಂಚಿನಮನಿ, ಸೋಮಣ್ಣ ಲಮಾಣಿ, ಬೀರಪ್ಪ ಲಮಾಣಿ, ಕುಮಾರ್ ಲಮಾಣಿ, ಭೀಮಣ್ಣ ಮೇಸಿ, ಎಚ್.ಎಂ. ನಾಯಕ್, ನಾಗೇಶ್ ಚೌವ್ಹಾಣ, ಮಹೇಶ್ ಬಣಕಾರ ಸೇರದಂತೆ ಹಲವಾರು ಪ್ರಮುಖರು ಹಾಜರಿದ್ದರು.