“ಮೀಸಲಾತಿ ಹೆಚ್ಚಳ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ”. ಸರ್ಕಾರಕ್ಕೆ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಆಗ್ರಹ; ಜಿಲ್ಲಾಧಿಕಾರಿ ಮೂಲಕ ಸಿಎಂ, ರಾಜ್ಯಪಾಲರಿಗೆ ಮನವಿ

Date:

“ಮೀಸಲಾತಿ ಹೆಚ್ಚಳ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ”
ಸರ್ಕಾರಕ್ಕೆ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಆಗ್ರಹ; ಜಿಲ್ಲಾಧಿಕಾರಿ ಮೂಲಕ ಸಿಎಂ, ರಾಜ್ಯಪಾಲರಿಗೆ ಮನವಿ
ಹಾವೇರಿ: ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಉಚ್ಚ ನ್ಯಾಯಾಲಯವು ಅಕ್ಟೋಬರ್ 12ರಂದು ನೀಡಿರುವ ಆದೇಶದಿಂದ ಒಟ್ಟು ಶೇ.6ರಷ್ಟು ಹೆಚ್ಚುವರಿ ಮೀಸಲಾತಿ ರದ್ದಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಈ ಸಂಬಂಧ ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ
ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ರೂಪಿಸಿರುವ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಅನುದಾನವನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ತಕ್ಷಣ ನಿಲ್ಲಿಸಬೇಕು. ಈ ಅನುದಾನವನ್ನು ಆಯಾ ಸಮುದಾಯಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯ ಕಲ್ಪಿಸಲು ಮಾತ್ರ ಬಳಸಬೇಕು ಎಂದು ಒತ್ತಾಯಿಸಲಾಯಿತು.
ಸಂವಿಧಾನದ ಆಶಯದಂತೆ ಸಾರ್ವಜನಿಕ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಮೀಸಲಾತಿ ಹೆಚ್ಚಳದ ಬೇಡಿಕೆ ದಶಕಗಳಿಂದ ಹೋರಾಟದ ರೂಪದಲ್ಲಿದೆ. 2018-19ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಮೀಸಲಾತಿ ಹೆಚ್ಚಳದ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವನ್ನು ರಚಿಸಿತ್ತು. ನಂತರ 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ನಡೆಸಿ ಮೀಸಲಾತಿ ಹೆಚ್ಚಳ ಘೋಷಿಸಿದ್ದರು.
ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ, ಅದಕ್ಕೆ ಕಾನೂನಾತ್ಮಕ ರಕ್ಷಣೆ ಒದಗಿಸುವ ಉದ್ದೇಶದಿಂದ ವಿಧೇಯಕಕ್ಕೆ ಶಾಸನಸಭೆಗಳ ಒಪ್ಪಿಗೆ ಹಾಗೂ ರಾಜ್ಯಪಾಲರ ಅಂಗೀಕಾರವನ್ನೂ ಪಡೆಯಲಾಗಿತ್ತು. ಆದರೆ, ಈಗಿನ ನ್ಯಾಯಾಲಯದ ಆದೇಶದಿಂದ ಸಮುದಾಯಗಳಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ. ಸರ್ಕಾರ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸದಿದ್ದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಡಚಪ್ಪ ಮಾಳಗಿ, ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಅಧ್ಯಕ್ಷ ಮಂಜಪ್ಪ ಮರೋಳ, ಕಲಾವಿದರ ಸಂಘದ ಅಧ್ಯಕ್ಷ ಡಾ. ತಿಪ್ಪೇಸ್ವಾಮಿ ಹೊಸಮನಿ, ಮುಖಂಡರಾದ ಅಶೋಕ ಮರೆಣ್ಣನವರ, ಸಂತೋಷ ಗುಡ್ಡಪ್ಪನವರ, ಮೈಲಪ್ಪ ಗೋಣಿಬಸಮ್ಮನವರ, ಮೈಲಪ್ಪ ದಾಸಪ್ಪನವರ, ಹೊನ್ನಪ್ಪ ಮಾಳಗಿ, ಜಗದೀಶ ಹರಿಜನ, ಬಸಣ್ಣ ಮುಗಳಿ, ಶ್ರೀಮತಿ ನೀಲವ್ವ ಪೂಜಾರ, ಗುಡ್ಡಪ್ಪ ಬಣಕಾರ, ಫಕ್ಕೀರೇಶ ನೀರಲಗಿ, ಮಲ್ಲಪ್ಪ ಹಂಚಿನಮನಿ, ಗುಡ್ಡಪ್ಪ ಮಾಳಗಿ, ಬಸವಣ್ಣೆಪ್ಪ ಅಳ್ಳಳ್ಳಿ, ಮಹೇಶಪ್ಪ ಹರಿಜನ, ಶೇಖಪ್ಪ ಕಲ್ಲೇದೇವರು, ಗುಡ್ಡಪ್ಪ ಅರಿಕಟ್ಟಿ, ರಾಮಪ್ಪ ದೊಡ್ಡಮನಿ, ಗಾಯತ್ರಿ ಅಂಗಡಿ, ಫಕ್ಕೀರೇಶ ಪುರದ, ನೇತ್ರಾ ಗೋಡೇರ, ಚಂದ್ರಪ್ಪ ದೊಡ್ಡಮನಿ, ಮಂಜುನಾಥ ಎನ್.ಎಸ್., ರೂಪಾ ವಾಲೀಕಾರ, ಗುಡ್ಡಪ್ಪ ಹರಿಜನ, ನಾಗಪ್ಪ ಸೋಮಣ್ಣನವರ, ಅಜ್ಜಪ್ಪ ಹರಿಜನ, ಬಸವರಾಜ ಮಾಳಗಿ, ಮರಿಯಪ್ಪ ಹರಿಜನ ಹಾಗೂ ದುರಗಪ್ಪ ಮಾದಾರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

malatesh angur
haveri

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮಾಲತೇಶ ಕರ್ಜಗಿ ಅವರಿಗೆ “ರಾಜ್ಯೋತ್ಸವ ಪ್ರಶಸ್ತಿ”

ಮಾಲತೇಶ ಕರ್ಜಗಿ ಅವರಿಗೆ "ರಾಜ್ಯೋತ್ಸವ ಪ್ರಶಸ್ತಿ" ಹಾವೇರಿ: ನಿವೃತ್ತ ಮುಖ್ಯ ಶಿಕ್ಷಕ ಮಾಲತೇಶ...

ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರ: ಗೆಲುವಿನ ನಗೆ ಬೀರಿದ ಸಂಕನೂರ ಎಸ್.ವಿ.

ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರ: ಗೆಲುವಿನ ನಗೆ ಬೀರಿದ ಸಂಕನೂರ...

೧೦ ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ

೧೦ ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ...