ರಾಣೆಬೆನ್ನೂರಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ *ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರು ತಾಲೂಕಿನಲ್ಲಿ ಅಭಿವೃದ್ಧಿಪಡಿಸಲು ಉದ್ದೇಶ * ಕನಕದಾಸರ ಸಾಹಿತ್ಯಪ್ರಕಟಣೆ ಮತ್ತು ಪ್ರಸಾರ ಕಾರ್ಯಗಳನ್ನು  ಕೈಗೊಳ್ಳಲು ಒಂದು ಕೋಟಿ

Date:

ರಾಣೆಬೆನ್ನೂರಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ *ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರು ತಾಲೂಕಿನಲ್ಲಿ ಅಭಿವೃದ್ಧಿಪಡಿಸಲು ಉದ್ದೇಶ * ಕನಕದಾಸರ ಸಾಹಿತ್ಯ ಪ್ರಕಟಣೆ ಮತ್ತು ಪ್ರಸಾರ ಕಾರ್ಯಗಳನ್ನು  ಕೈಗೊಳ್ಳಲು ಒಂದು ಕೋಟಿ
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಹಾವೇರಿ ಜಿಲ್ಲೆಯ ರಾಣೆಬೆನ್ನೂರಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಗೆ ಮತ್ತೊಂದು ಮಹತ್ವದ ಘೋಷಣೆ ಮಾಡಲಾಗಿದ್ದು, ತ್ರಿಪದಿಗಳ ಮೂಲಕ ಜೀವನ ಸಾರ ಹೇಳಿದ ವಚನಕಾರ ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರು ತಾಲೂಕಿನಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಸಂತ ಕವಿ ಕನಕದಾಸ ಅಧ್ಯಯನ ಕೇಂದ್ರದ ಮೂಲಕ ತತ್ವಪದ, ಕೀರ್ತನ ಸಾಹಿತ್ಯ ಮತ್ತು ಭಕ್ತಿ ಚಳವಳಿ ಸೇರಿದಂತೆ ಸಾಹಿತ್ಯ ಸಮೀಕ್ಷೆ ಸಂಗ್ರಹಣೆ, ಪ್ರಕಟಣೆ ಮತ್ತು ಪ್ರಸಾರ ಕಾರ್ಯಗಳನ್ನು ಕೈಗೊಳ್ಳಲು ಒಂದು ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಎಪಿಎಂಸಿಗಳ ಎಲ್ಲ ಕಾ‍ರ್ಯಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೈಜ್‌ ಮಾಡಲು, ಹಲವು ಎಪಿಎಂಸಿಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪನೆ ಮಾಡಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಎಲ್ಲ ಎಪಿಎಂಸಿಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಚಾರ್ಜಿಂಗ್‌ ಕೇಂದ್ರ, ಪೆಟ್ರೋಲ್‌ ಬಂಕ್‌ಗಳ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಪ್ರಕಟಿಸಿದ್ದಾರೆ.
ಎಪಿಎಂಸಿಗಳನ್ನು ಬಲಪಡಿಸುವ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗುವಂತೆ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಆರ್ಥಿಕವಾಗಿ ದುರ್ಬಲವಾಗಿರುವ ಎಪಿಎಂಸಿಗಳೀಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆ ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚನೆ ಮಾಡಲಾಗುವುದು. ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಕಬ್ಬು ಬೆಳೆಗಾರರ ಹಿತರಕ್ಷಣೆ ಮತ್ತು ತೂಕದಲ್ಲಿನ ಮೋಸ ತಡೆಗೆ ಎಲ್ಲ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿಗಳ ಮೂಲಕ ವೇ ಬ್ರಿಡ್ಜ್‌ ಸ್ಥಾಪನೆ ಘೋಷಿಸಲಾಗಿದೆ. ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಸಾ‍ರ್ವಜನಿಕ ಸಹಭಾಗತ್ವದಲ್ಲಿ ಶೀತಲಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ.
ರಾಜ್ಯದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ 2024-29ರ ಅವಧಿಗೆ ಹತ್ತು ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗ ಸೃಷ್ಟಿ ಗುರಿಯೊಂದಿಗೆ ಹೊಸ ಜವಳಿ ನೀತಿ ರಚನೆಗೆ ನಿರ್ಧರಿಸಲಾಗಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ ಸಾವಿರ ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಗಾ ಟೆಕ್ಸ್‌ ಟೈಲ್‌ ಪಾರ್ಕ್ ನಿರ್ಮಿಸಲು ಉದ್ದೇಶಿಸಿದ್ದು, ಇದರಿಂದ ಒಂದು ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್‌ ಉದ್ದಿಮೆ ಸಂಘಟಿಸಿ ವಿ‍ಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯ ಒಳಗೊಂಡಂತೆ ಜೀನ್ಸ್‌ ಅಪರೆಲ್‌ ಪಾರ್ಕ್‌ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಘೋಷಣೆ ಮಾಡಲಾಗಿದೆ. ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಂಜನಗೂಡು ತಾಲೂಕು ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕೆ ಕ್ರಮ ಕೈಗೊಳ್ಳವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಎಪಿಎಂಸಿಗಳಿಂದ ವೇ ಬ್ರಿಡ್ಜ್‌
ರೈತರ ಹಿತರಕ್ಷಣೆ ದೃಷ್ಟಿಯಿಂದ ಎಪಿಎಂಸಿಗಳನ್ನು ಬಲಪಡಿಸಲು ಹಲವು ಯೋಜನೆ, ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಎಪಿಎಂಸಿಗಳಿಂದ ವೇ ಬ್ರಿಡ್ಜ್‌ ನಿರ್ಮಾಣ ನಿರ್ಧಾರ ಪ್ರಕಟಿಸಲಾಗಿದೆ. ಮನವಿಗೆ ಸ್ಪಂದಿಸಿ ಬಜೆಟ್‌ನಲ್ಲಿ ಹಲವು ಯೋಜನೆ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು
ಶಿವಾನಂದ ಎಸ್‌. ಪಾಟೀಲ
ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...