ವಾರ್ತಾಧಿಕಾರಿ ಡಾ. ಬಿ.ಆರ್.ರಂಗನಾಥ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

Date:

ಹಾವೇರಿ: ವಯೋನಿವೃತ್ತಿ ಹೊಂದಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್ ಹಾಗೂ ಇಲಾಖೆ ಸಿಬ್ಬಂದಿ ಶ್ರೀಮತಿ ರಾಮವ್ವ ಕೊರವರ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ನಗರದ ಜಿಲ್ಲಾ ವಾರ್ತಾ ಭವನದಲ್ಲಿ ಶುಕ್ರವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಮಾಧ್ಯಮ ಪ್ರತಿನಿಧಿಗಳಾದ ಬಸವರಾಜ ಮರಳಿಹಳ್ಳಿ, ಕೇಶವಮೂರ್ತಿ, ವಿರೇಶ ಬಾರ್ಕಿ, ಸಂಕನಗೌಡ ಎಂ.ಡಿ. ನಾರಾಯಣ ಹೆಗಡೆ, ರಾಜು ನದಾಫ್, ಮಾಲತೇಶ ಅಂಗೂರ, ನಿಂಗಪ್ಪ ಚಾವಡಿ, ಫಕ್ಕೀರಯ್ಯ ಗಣಾಚಾರಿ, ಆರ್.ಜಿ.ಮಹಾನುಬಾವಿಮಠ ಅವರು ಮಾತನಾಡಿ, ಜಿಲ್ಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್ ಅವರು ಉತ್ತಮ ಮೇಧಾವಿ, ಉತ್ತಮ ಬರಹಗಾರರು ಆಗಿದ್ದು, ಮುಖ್ಯಮಂತ್ರಿಗಳ, ಸಚಿವರ ಕಾರ್ಯಕ್ರಮ, ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸರ್ಕಾರ ಮತ್ತು ಮಾಧ್ಯಮದವರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿದರು. ಸದಾ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಿದೆ. ಮಾಧ್ಯದವರಿಗೆ ಕಾಲಕಾಲಕ್ಕೆ ಮಾಹಿತಿ ಒದಗಿಸುತ್ತಿದ್ದರು ಹಾಗೂ ಮಾಧ್ಯಮದವರೊಂದಿಗೆ ಸ್ನೇಹಪೂರ್ವಕವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ನಿವೃತ್ತಿ ಜೀವನ ಸುಖರವಾಗಿರಲಿ ಎಂದು ಶುಭ ಹಾರೈಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಸರ್ಕಾರಿ ನೌಕರರ ಜಿಲ್ಲಾ ನೌಕರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಸಾಹಿತಿ ಸತೀಶ ಕುಲರ್ಣಿ ಅವರು ಮಾತನಾಡಿ, ಬಿ.ಆರ್.ರಂಗನಾಥ್ ಅವರು ಒಬ್ಬ ಅಧಿಕಾರಿಯಾಗಿ ಕಾರ್ಯನಿರ್ವಹಿಸದೇ ಒಬ್ಬ ಮಾರ್ಗದರ್ಶಕ, ಸಾಹಿತಿ ಸೇರಿದಂತೆ ಅನೇಕ ಕ್ಷೇತ್ರಗಳನ್ನು ತಮ್ಮ ತೊಡಸಿಕೊಂಡಿದ್ದಾರೆ. ಅವರ ಪಾಂಡಿತ್ಯ ಅಘಾದವಾದದ್ದು ಎಂದು ಬಣ್ಣಿಸಿದರು.
ವಯೋನಿವೃತ್ತಿ ಹೊಂದಿದ ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ವಾರ್ತಾಧಿಕಾರಿಗಳು ಸಮಾಜದ ಪರವಾಗಿ, ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸರ್ಕಾರ ಮತ್ತು ಮಾಧ್ಯಮ ಮತ್ತು ಜನರ ಸಂಪರ್ಕ ಸೇತುವೆಯಾಗಿ ಕೆಲಸ ನಿರ್ವಹಿಸಬೇಕು. ಮಾಧ್ಯಮ ಅತ್ಯದ್ಭುತ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸಮಾಡಬೇಕು. ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಿಳಿಸುವ ಕೆಲಸಮಾಡಬೇಕು. ನನ್ನ ೨೬ ವರ್ಷಗಳ ನನ್ನ ವೃತ್ತಿಜೀವನ ನನಗೆ ತೃಪ್ತಿ ನೀಡಿದೆ. ನಾನು ಕಾಯಕವೇ ಕೈಲಾಸ ಎಂದು ನಂಬಿದ್ದೇನೆ. ಈ ನನ್ನ ಪಯಣದಲ್ಲಿ ನನಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ ಪ್ರತಿನಿಧಿಗಳು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರ.ದ.ಸ ರಾಘವೇಂದ್ರ ಕುರಣೆ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಕೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...