

ಶಿವಣ್ಣನವರಿಗೆ ಅರಣ್ಯ ಅಭಿವೃದ್ಧಿ ನಿಗಮ, ಮಾನೆಗೆ ಡಿಸಿಎಂ ರಾಜಕೀಯ ಸಲಹೆಗಾರ
ಹಾವೇರಿ: ೩೨ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಇದರಲ್ಲಿ ಹಾವೇರಿಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಬಸವರಾಜ್ ನೀಲಪ್ಪ ಶಿವಣ್ಣನವರ್ಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಾನಗಲ್ಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರೆಂದು ನೇಮಿಸಿ ಆದೇಶಿಸಲಾಗಿದೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಸವರಾಜ ಶಿವಣ್ಣನವರಿಗೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷಸ್ಥಾನ ನೀಡುವ ಮೂಲಕ ಅವರನ್ನು ಸಮಾದಾನ ಪಡಿಸಲಾಗಿದೆ. ಶ್ರೀನಿವಾಸ ಮಾನೆ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕಮಾಡಿ ಇವರುಗಳಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ .

