“ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಉಗುಳಿದರೆ ದಂಡ ವಿಧಿಸಿ” ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಉಗುಳಿದರೆ ಅಂತವರಿಗೆ ದಂಡವಿಧಿಸಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ದಂಡದ ಸೂಚನಾ ಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ತಂಬಾಕು ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಅವರು, ತಂಬಾಕು ನಿಯಂತ್ರಣ ತಿದ್ದುಪಡಿ ಕಾಯ್ದೆ-೨೦೨೪ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದೆ. ೨೧ ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ದಂಡದ ಮೊತ್ತವನ್ನು ರೂ.೨೦೦ ಮೊತ್ತದ ಬದಲಾಗಿ ರೂ. ಒಂದು ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ಕಾಯ್ದೆಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ನಿಯಮಾನುಸಾರ ಸಭೆ ನಡೆಸಬೇಕು ಹಾಗೂ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಂದು ಸೂಚಿಸಿದರು.
. ಜಿಲ್ಲೆಯ ಎಲ್ಲಾ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ತಂಬಾಕು ಮಾರಾಟಗಾರರಿಗೆ ನಿಯಮನುಸಾರ ಪ್ರತ್ಯೇಕ ಪರವಾನಗಿ ನೀಡಬೇಕು ಎಂದು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲೆಯ ಬಸ್ ನಿಲ್ದಾಣಗಳ ಮಳಿಗೆಗಳಲ್ಲಿ ಕಡ್ಡಾಯವಾಗಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.
ನಿಯಮಾನುಸಾರ ಶಾಲಾ-ಕಾಲೇಜುಗಳ ೧೦೦ ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಆಯಾ ಶಾಲಾ-ಕಾಲೇಜುಗಳ ವ್ಯಾಪ್ತಿಯ ಸ್ಥಳೀಯ ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಶಾಲಾ-ಕಾಲೇಜುಗಳ ೧೦೦ ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ತಡೆಗೆ ಕ್ರಮಕೈಗೊಳ್ಳಬೇಕು. ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮಾಡಬೇಕು ಹಾಗೂ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಹಾಗೂ ಕೋಟ್ಪಾ-೨೦೦೩ ರ ಕಾಯ್ದೆ ಪರಿಣಾಮಕಾರಿ ಅನುಷ್ಠಾನದ ಮೂಲಕ ತಂಬಾಕು ಮುಕ್ತ ಗ್ರಾಮಗಳ ಘೋಷಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ರಾಜ್ಯ ತಂಬಾಕು ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಕಳೆದ ೨೦೨೪-೨೫ನೇ ಸಾಲಿನಲ್ಲಿ ೭೩ ದಾಳಿ ನಡೆಸಿ, ೬೯೫ ಪ್ರಕರಣ ದಾಖಲಿಸಲಾಗಿದೆ. ರೂ.೬೦,೫೩೦ ದಂಡ ಸಂಗ್ರಹಣೆ ಮಾಡಲಾಗಿದೆ. ೧೦,೭೫೫ ಪುರು? ಹಾಗೂ ೭,೨೨೧ ಮಹಿಳೆಯರು ಸೇರಿ ೧೭,೯೭೬ ಜನರಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ, ನಿಕೋಟಿನ್ ಗಮ್ಸ್ ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ತಂಬಾಕು ಸೇವನೆಯ ದು?ರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ತಂಬಾಕು ನಿಯಂತ್ರಣ ಕಾಯ್ದೆಯ(ಅಔಖಿPಂ-೨೦೦೩) ಪರಿಣಾಮಕಾರಿ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ ಆರ್ ಹಾವನೂರ, ಆರ್.ಸಿ.ಎಚ್ ಅಧಿಕಾರಿ ಡಾ. ಜಯಾನಂದ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನು?ನಾಧಿಕಾರಿ ಡಾ.ಜಗದೀಶ ಪಾಟೀಲ, ಡಾ. ನೀಲೇಶ,ಡಾ.ಸಂತೋಷ ದಡ್ಡಿ, ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Date: