
ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ
ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ೬ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಖಾನ್ ಪಠಾಣ ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಇದ್ದರು.

