ಆ.೩೦ಕ್ಕೆ ದೇವರಗುಡ್ಡ-ಹಾವೇರಿಗೆ ಸಿಎಂ ಸಿದ್ದರಾಮಯ್ಯ ಭೇಟಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ.೩೦ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬ್ಯಾಡಗಿ ವಿಧಾನಸಭಾ ಕ್ಷೇತ್ರ ದೇವರಗುಡ್ಡಕ್ಕೆ ಹಾವೇರಿ ವಿಧಾನಭಾ ಕ್ಷೇತ್ರದ ಐತಿಹಾಸಿ ಹೆಗ್ಗೇರೆಕೆರೆಗೆ ಅವರು ಭೇಟಿ ನೀಡಲಿದ್ದಾರೆ.
ಆ.೩೦ ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ೧೧.೩೦ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳು ಆಗಮಿಸುವರು. ಹುಬ್ಬಳ್ಳಿ ವಿಮಾನ ನಿಲ್ದಾಣ, ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡಕ್ಕೆ ಮಧ್ಯಾಹ್ನ :೧೨.೩೫ ಆಗಮಿಸುವರು.
ರಾಣೇಬೆನ್ನೂರು ತಾಲ್ಲೂಕು ಸುಕ್ಷೇತ್ರ, ದೇವರಗುಡ್ಡ ಗ್ರಾಮದಲ್ಲಿ ದೇಶ ಪ್ರೇಮಿ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಹಾಗೂ ಶ್ರೀ ಕನಕ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸದರಿ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆದ ಬಸವರಾಜ ಶಿವಣ್ಣನವರ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಾಸಕರುಗಳಾದ ರುದ್ರಪ್ಪ ಲಮಾಣಿ, ಪ್ರಕಾಶ ಕೋಳಿವಾಡ, ಶ್ರೀನಿವಾಸ ಮಾನೆ, ಯು.ಬಿ.ಬಣಕಾರ, ವಿಧಾನಸಭೆಯ ಉಪಸಭಾ ಪತಿ ರುದ್ರಪದಪ ಲಮಾಣಿ ಸೇರಿದಂತೆ ಅನೇಕ ಸಚಿವರು, ಶಾಸಕರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಮಧ್ಯಾಹ್ನ ೦೩.೩೦ಕ್ಕೆ ದೇವರಗುಡ್ಡದಿಂದ ರಸ್ತೆಯ ಮೂಲಕ ಹಾವೇರಿಗೆ ಆಗಮಿಸುವರು. ಸಂಜೆ ೦೪.೦೦ಕ್ಕೆ ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆಗೆ ಭೇಟಿ ನೀಡಿ ಹಾವೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈತರ ಹಾಗೂ ಹಾವೇರಿನಗರದ ಜನತೆಯ ಕುಡಿಯುವ ನೀರು ಪೂರೈಸುವ ಜೀವನಾಡಿಯಾಗಿರುವ ಹೆಗ್ಗೇರಿ ಕೆರೆಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ನಂತರ ಅವರು ಹೆಗ್ಗೇರಿ ಕೆರೆ ಪ್ರದೇಶದಿಂದ ರಸ್ತೆಯ ಮೂಲಕ ಸಂಜೆ ೦೬.೦೦: : ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು. ಅಲ್ಲಿಂದ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರು ತಲುಪುವರೆಂದು ಮುಖ್ಯಮಂತ್ರಿಗಳ ಕಚೇರಿಯ ಮಾಧ್ಯಮ ಪ್ರಕಟಣೆ ತಿಳಿಸಿದೆ.

Date: