News Week
Magazine PRO

Company

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Date:

*2022 ರಿಂದ 2024 ರ ವರೆಗಿನ ವಾರ್ಷಿಕ ಪ್ರಶಸ್ತಿ ವಿತರಿಸಿದ ಸಿಎಂ**ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು: ಸಿಎಂ ಸೂಚನೆ*

ಬೆಂಗಳೂರು :ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ ರೆಡ್ಡಿ ವಂಟಗೋಡಿ ಅಧಿಕಾರ ಸ್ವೀಕಾರ

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ...