ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

Date:

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು
ಹೊರಟಿದ್ದು ಮಂತ್ರಾಲಯಕ್ಕೆ-ಸೇರಿದ್ದು ಮಸಣಕ್ಕೆ
ಹಾವೇರಿ/ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿಯ ಐವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಹಾವೇರಿನಗರದ ವಿದ್ಯಾನಗರದ ನಿವಾಸಿಗಳಾಗಿದ್ದ ನಾಲ್ವರು  ಹಾಗೂ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಓರ್ವ ಎಂದು ಗುರುತಿಸಲಾಗಿದೆ.
ಮೃತರು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರು ಬರುತ್ತಿದ್ದ ಓಮಿನಿ ವಾಹನಕ್ಕೆ ಜವರಾಯನ ರೂಪದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಕೆಂಚಮ್ಮ ಬಾಳೆಕಾಯಿ (೩೫), ಅಮೃತಾ ಕೋಟ್ಯಾಳ್ (೨೫), ರಮೇಶ್ ಬಳ್ಳಾರಿ (೪೫) ಹಾಗೂ ಹಾವೇರಿ ಲೋಕೋಪಯೋಗಿ ಇಲಾಖೆಯ ಎಸ್‌ಡಿಸಿ ನೌಕರನಾಗಿದ್ದ ಪ್ರವೀಣ್ ಬಾಳೆಕಾಯಿ (೨೩) ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯ (೩೦) ಎಂಬುವರು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಶನಿವಾರ ಸಂಜೆ ಶವಗಳನ್ನು ಹಾವೇರಿಗೆ ತರಲಾಗಿದ್ದು, ಬಂಧುಗಳ ಮುಗಿಲು ಮುಟ್ಟಿದ ಆಕ್ರಂದನದ ನಡುವೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಪಘಾತದಲ್ಲಿ ಗಾಯಗೊಂಡ ಆರು ಮಂದಿಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸಂಸದ ಬಸವರಾಜ ಬೊಮ್ಮಾಯಿ ಸಂತಾಪ: ಕೊಪ್ಪಳ ಜಿಲ್ಲೆಯ ಭಾನಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದವರ ಸಾವು – ನೋವು ಸುದ್ದಿ ಅತ್ಯಂತ ನೋವುಂಟು ಮಾಡಿದೆ. ಹಾವೇರಿ ಜಿಲ್ಲೆಯ ಕೆಲವರು ಮೃತಪಟ್ಟು , ಹಲವರು ಗಾಯಗೊಂಡಿರುವ ಮಾಹಿತಿ ಇದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣವೇ ಘೋಷಿಸಬೇಕು. ಜೊತೆಗೆ ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯವಿರುವ ಎಲ್ಲಾ ನೆರವನ್ನು ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಹೊರಟಿದ್ದು ಮಂತ್ರಾಲಯಕ್ಕೆ-ಸೇರಿದ್ದು ಮಸಣಕ್ಕೆ: ಹಾವೇರಿಯ ಎರಡು ಕುಟುಂಬಗಳ ೯ ಸದಸ್ಯರು ಶುಕ್ರವಾರ ರಾತ್ರಿ ಮಂತ್ರಾಲಯಕ್ಕೆ ಹೊರಟಿದ್ದರು. ಅದರೆ ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಭಾನಾಪುರ ಕ್ರಾಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ  ಭೀಕರ ರಸ್ತೆ ಅಪಘಾತದಲ್ಲಿ ಎರಡು ಕುಟುಂಬಗಳು ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಾವೇರಿ ಮೂಲದ ಪ್ರವೀಣ್ ಬಾಳಿಕಾಯಿ, ಅವರ ಪತ್ನಿ ಕೆಂಚಮ್ಮ ಬಾಳಿಕಾಯಿ (ಹೇಮಾ) ಹಾಗೂ ಪುತ್ರ ಚಿನ್ಮಯ್ ಬಾಳಿಕಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪ್ರವೀಣ್ ಬಾಳಿಕಾಯಿ ಅವರು ಲೋಕೋಪಯೋಗಿ ಇಲಾಖೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಸುಮಾರು ೧೦.೩೦ ಗಂಟೆಗೆ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ಕುಟುಂಬವು ರಟ್ಟಿಹಳ್ಳಿ ತಾಲೂಕಿನ ಹಿರೇಕಬ್ಬಾರ ಗ್ರಾಮದ ಪ್ರವೀಣ ಕೋಟಿಹಾಳ ಗಂಭೀರಗಾಯ ಗಾಯಗೊಂಡಿದ್ದಾನೆ. ಪತ್ನಿ ಅಮೃತ ಕೋಟಿಹಾಳ ಸಾವನ್ನಪ್ಪಿದ್ದಾಳೆ. ಹಾವೇರಿಯ ಶಿವಾಜಿ ನಗರದ ನಿವಾಸಿ ಕಾರುಚಾಲಕ ರಮೇಶ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಗಾಯಗೊಂಡಿರುವ ಸೋನಾಲಿಕಾ ಹಾಗೂ ಸಮರ್ಥ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಕ್ಷತ್ರಿಯ ಧರ್ಮದ ನಿಯಮಗಳಂತೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...

ಹಾವೇರಿಜಿಲ್ಲೆಗೆ ಸತೀಶ ಜಾರಿಕಿಹೊಳಿಯವರಿಗೆ ಉಸ್ತುವಾರಿ

  ಹಾವೇರಿಜಿಲ್ಲೆಗೆ ಸತೀಶ ಜಾರಿಕಿಹೊಳಿಯವರಿಗೆ ಉಸ್ತುವಾರಿ ಹಾವೇರಿ: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ...