ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ : ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ

Date:

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯ ಮಂತ್ರಿ‌, ಸಂಸದ‌ ಬಸವರಾಜ್ ಬೊಮ್ಮಾಯಿ‌ಅವರಿಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಈ‌ ಬಗ್ಗೆ ಪ್ರತಿಕ್ರಿಯೆ ‌ನೀಡಿರುವ ಅವರು
ಹಾವೇರಿ ವಿವಿ  ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳನ್ನು ತಿಳಿಸಿದ್ದಾರೆ.
ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. 
ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ.
ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ.
ಮತ್ತೊಮ್ಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...