ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ಸೇರಿ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ
ಹಾವೇರಿ:ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಗುತ್ತದೆ.ಶನಿವಾರ 2024 ನೇ ಸಾಲಿನ ಸಿಎಂ ಪದಕ ವಿಜೇತರ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು 2024 ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಬಾಜನರಾಗಿದ್ದಾರೆ.
ಜೊತೆಗೆ ಶಿಗ್ಗಾಂವಿ ಪೊಲೀಸ್ ಠಾಣೆಯ ಹೆಚ್ ತಿಪ್ಪೆಸ್ವಾಮಿ, ಸ್ಪೆಷಲ್ ಆರ್‌ಹೆಚ್‌ಸಿ:66, 10ನೇ ಪಡೆ, ಕೆಎಸ್‌ಆರ್‌ಪಿ, ಬಟಾಲಿಯನ್ ನ ಸಿಬ್ಬಂದಿ ಹಾಗೂ ಸವಣೂರು ಪೊಲೀಸ್ ಠಾಣೆಯ ಬಸವರಾಜ ಡಿ ಮಲ್ಲೂರ್, ಸಿಹೆಚ್‌ಸಿ:783 ಸಿಬ್ಬಂದಿಗೂ ಸಿಎಂ ಮೆಡಲ್ ಲಭಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ಸೇರಿ ಜಿಲ್ಲೆಯ ಮೂವರಿಗೆ ಸಿಎಂ ಮೆಡಲ್ ಲಭಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಒಳಾಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಈ ಪತ್ರ ಹೊರಡಿಸಿದ್ದಾರೆ.