ಜಿಲ್ಲೆಯ ಮೊದಲ ಕ್ಯಾತ್‌ಲ್ಯಾಬ್ ಹಾವೇರಿಯ ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಜು.೧೨ಕ್ಕೆ ಲೋಕಾರ್ಪಣೆ

Date:

ಹಾವೇರಿ: ಹೃದಯ ಸಂಬಂಧಿ ಕಾಯಿಲೆಗಳಿಗೆ ಅತ್ಯಾಧುನಿಕ ಹಾಗೂ ತ್ವರಿತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಹೊಸದೊಂದು ಮೈಲಿಗಲ್ಲು ನಿರ್ಮಾಣವಾಗುತ್ತಿದ್ದು, ಜು. ೧೭ರಂದು ಇಲ್ಲಿನ ‘ಸರ್ಜಿ ರೇಣುಕಾ ದೇವಧರ ಆಸ್ಪತ್ರೆ’ಯಲ್ಲಿ ಜಿಲ್ಲೆಯ ಮೊಟ್ಟ ಮೊದಲ ಅತ್ಯಾಧುನಿಕ ಕ್ಯಾತ್‌ಲ್ಯಾಬ್ ಸೌಲಭ್ಯವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮಧು ಕೆ.ಆರ್. ಹೇಳಿದರು. ಇಲ್ಲಿಯ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕ್ಯಾತ್‌ಲ್ಯಾಬ್ ಸೌಲಭ್ಯದಿಂದ ಹೃದಯಾಘಾತ ಸೇರಿದಂತೆ ವಿವಿಧ ಹೃದಯ ಕಾಯಿಲೆಗಳಿಗೆ ಜಿಲ್ಲೆಯಲ್ಲಿಯೇ ತ್ವರಿತ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆಯಲಿದ್ದು, ರೋಗಿಗಳು ಹೊರ ಜಿಲ್ಲೆಗಳ ಅವಲಂಬನೆಯಿಂದ ಮುಕ್ತರಾಗಲಿದ್ದಾರೆ. ಹೃದಯಾಘಾತ ಸಂಭವಿಸಿದ ಬಳಿಕ ಮೊದಲ ಒಂದು ಗಂಟೆಯನ್ನು ವೈದ್ಯಕೀಯ ಕ್ಷೇತ್ರದಲ್ಲಿ ‘ಗೋಲ್ಡನ್ ಅವರ್’ ಎಂದು ಕರೆಯಲಾಗುತ್ತದೆ. ಈ ಅವಧಿಯಲ್ಲೇ ಆಂಜಿಯೋಗ್ರಾಮ್ ಅಥವಾ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ದೊರೆತರೆ ರೋಗಿಯ ಜೀವ ಉಳಿಯುವ ಸಾಧ್ಯತೆ ಶೇ.೯೦ರಷ್ಟಿರುತ್ತದೆ ಎಂದರು.
ಇಲ್ಲಿಯವರೆಗೆ ಹಾವೇರಿ ಜಿಲ್ಲೆಯಲ್ಲಿ ಕ್ಯಾತ್‌ಲ್ಯಾಬ್ ಸೌಲಭ್ಯ ಇಲ್ಲದ ಕಾರಣ ಹೃದಯಾಘಾತಕ್ಕೊಳಗಾದ ರೋಗಿಗಳನ್ನು ಹುಬ್ಬಳ್ಳಿ ಅಥವಾ ದಾವಣಗೆರೆಗೆ ಸಾಗಿಸಬೇಕಾಗುತ್ತಿತ್ತು. ಈ ವೇಳೆ ಸಂಚಾರದ ವಿಳಂಬದಿಂದ ಗೋಲ್ಡನ್ ಅವರ್‌ನಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಜಿಲ್ಲೆಯಲ್ಲಿ ನೂರಾರು ಅಮೂಲ್ಯ ಜೀವಗಳು ಮಾರ್ಗ ಮಧ್ಯೆಯೇ ಅಕಾಲಿಕವಾಗಿ ಸಾವನ್ನಪ್ಪಿರುವ ಅನೇಕ ಹೃದಯವಿದ್ರಾವಕ ನಿದರ್ಶನಗಳಿವೆ. ಈ ಕೊರತೆಯನ್ನು ನೀಗಿಸಲು ಮತ್ತು ಹಾವೇರಿಯ ಜನತೆಗೆ ಸ್ಥಳೀಯವಾಗಿಯೇ ಅತ್ಯಂತ ಕಡಿಮೆ ವೆಚ್ಚದಲ್ಲಿ ಶ್ರೇಷ್ಠ ದರ್ಜೆಯ ಹೃದಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಈ ಕ್ಯಾತ್‌ಲ್ಯಾಬ್ ಸೇವೆಯನ್ನು ಆರಂಭಿಸುತ್ತಿದ್ದೇವೆ. ಈ ಹೊಸ ಕ್ಯಾತ್‌ಲ್ಯಾಬ್ ಆರಂಭದಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
ಬದಲಾದ ಜೀವನಶೈಲಿ, ಮಾನಸಿಕ ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ೨೫ರಿಂದ ೩೫ವರ್ಷದ ಯುವ ಜನತೆಯಲ್ಲಿಯೂ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೃದಯ ಚಿಕಿತ್ಸೆಯಲ್ಲಿ ‘ಟೈಮ್ ಈಸ್ ಮಸಲ್’ ಎಂಬ ತತ್ವ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿ ನಿಮಿಷದ ವಿಳಂಬವೂ ಹೃದಯ ಸ್ನಾಯುಗಳ ಜೀವಕೋಶಗಳ ನಾಶಕ್ಕೆ ಕಾರಣವಾಗುತ್ತದೆ ಎಂದು ಡಾ. ಮಧು ಕೆ.ಆರ್  ವಿವರಿಸಿದರು.
ಆಸ್ಪತ್ರೆಯಲ್ಲಿ ಆರಂಭವಾಗುತ್ತಿರುವ ಕ್ಯಾತ್ ಲ್ಯಾಬ್ ೨೪ಗಂಟೆಗಳ ತುರ್ತು ಸೇವೆಗೆ ಸಜ್ಜಾಗಿದ್ದು, ಹೃದ್ರೋಗ ತಜ್ಞ ಡಾ. ದೀಪಕ್ ಕುಮಾರ್ ಅವರ ನೇತೃತ್ವದಲ್ಲಿ ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲಾಸ್ಟಿ ಸೇರಿದಂತೆ ಅತ್ಯಾಧುನಿಕ ಹೃದಯ ಚಿಕಿತ್ಸೆಗಳು ಲಭ್ಯವಾಗಲಿವೆ. ಇದರಿಂದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯುವುದರ ಜೊತೆಗೆ ಸಮಯ ಮತ್ತು ಹಣವೂ ಉಳಿತಾಯವಾಗಲಿದೆ ಎಂದು ತಿಳಿಸಿದ ಅವರು ಎಲ್ಲಕ್ಕಿಂತ ಮುಖ್ಯವಾಗಿ ‘ಗೋಲ್ಡನ್ ಅವರ್’ನಲ್ಲಿಯೇ ಜೀವ ಉಳಿಸುವ ಮಹತ್ತರ ಕಾರ್ಯ ನಮ್ಮ ಹಾವೇರಿಯಲ್ಲಿಯೇ ಸಾಧ್ಯವಾಗಲಿದೆ. ದೂರದ ಊರುಗಳಿಗೆ ಪ್ರಯಾಣಿಸುವಾಗ ಗೋಲ್ಡನ್ ಅವರ್ ಮೀರಿ ಸಂಭವಿಸುತ್ತಿದ್ದ ದುರಂತಗಳಿಗೆ ಈ ಕ್ಯಾತ್ ಲ್ಯಾಬ್ ಮುಕ್ತಿ ನೀಡಲಿದೆ. ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಘವಾಂಕ ಎಚ್., ಡಾ. ದೀಪಕ್ ಕುಮಾರ್, ಪ್ರವೀಣಕುಮಾರ್ ವಿ.ಸಿ. ಹಾಗೂ ಗುಡ್ಡಪ್ಪ ಅಂಚಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಠ್ಯವಿತರಣೆ

. ಹಾವೇರಿ: ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಠ್ಯವಿತರಣೆ ಹಾವೇರಿ: ಪಿಯುಸಿ ಕಾಲೇಜ್ ವಿದ್ಯಾರ್ಥಿಗಳ...

ಹಾವೇರಿ: ಕಾರ್ಮಿಕರ ಅಪಘಾತ ಪ್ರಕರಣ ನಿರ್ಲಕ್ಷ್ಯ- ಅಧಿಕಾರಿಗಳ ಅಮಾನತಿಗೆ ಆಗ್ರಹ

ಹಾವೇರಿ: ಕಾರ್ಮಿಕರ ಅಪಘಾತ ಪ್ರಕರಣ ನಿರ್ಲಕ್ಷ್ಯ- ಅಧಿಕಾರಿಗಳ ಅಮಾನತಿಗೆ ಆಗ್ರಹ ಹಾವೇರಿ: ನಗರದ...

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ: ನಟ ಚೇತನ್

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ:...

“ಬೆಳಗಾವಿ ಕರ್ನಾಟಕದ ಅವಿಭಾಜ್ಯ” ಘೋಷಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯ ಪ್ರತಿಭಟನೆ

"ಬೆಳಗಾವಿ ಕರ್ನಾಟಕದ ಅವಿಭಾಜ್ಯ" ಘೋಷಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯ ಪ್ರತಿಭಟನೆ ಹಾವೇರಿ:...