ನೆಲ, ಜಲ,ಭಾಷೆಯ ಸಮೃದ್ಧಿಗೆ ಶ್ರಮಿಸಿದ ಶ್ರೇಯಸ್ಸು ಕಸಾಪಕ್ಕೆ ಸಲ್ಲುತ್ತದೆ

Date:

ಹಾವೇರಿ: ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ಸಮೃದ್ಧಿಗೆ ಶ್ರಮಿಸಿದ ಶ್ರೇಯಸ್ಸು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಅಭಿಪ್ರಾಯ ಪಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಕಚೇರಿಯಲ್ಲಿ ಸೋಮವಾರ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ವರು ಮಾತನಾಡಿದರು.
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ. ಹಾವೇರಿಯ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಆಡಳಿತ ಕಚೇರಿಯ ಪೂರಕ ಅಭಿವೃದ್ಧಿ ಕಾಮಗಾರಿಗಳು ಮುಂದುವರೆದಿವೆ. ಸ್ವಾಯತ್ತ ಸಂಸ್ಥೆಗೆ ಸ್ವತಂತ್ರ ಕಚೇರಿ ಹೊಂದಿರುವುದು ನಮ್ಮ ಶ್ರಮವನ್ನು ಸಾರ್ಥಕಗೊಳಿಸಿದೆ. ಮುಂದಿನ ದಿನಗಳಲ್ಲಿ ನಾವು ನಿಭಾಯಿಸುವ ಹೊಣೆಗಾರಿಕೆ ಇನ್ನೂ ಇದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಾಧ್ಯಾಪಕ ಡಾ.ಸಂಜೀವ ಆರ್ .ನಾಯಕ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರು ಸದಾ ಸ್ಮರಣೀಯರು. ಅವರ ದೂರದೃಷ್ಟಿಯ ಚಿಂತನೆಯ ಫಲವಾಗಿ ಕನ್ನಡ ಸಾಹಿತ್ಯ ಪರಿಷತ್ತು ದೀರ್ಘಕಾಲ ಸಾಗಿ ಬಂದಿದೆ ಎಂದರು.
ಹಿರಿಯ ಸಾಹಿತಿ ಸತೀಶ ಕುಲಕರ್ಣಿ, ಪ್ರೊ.ಮಾರುತಿ ಶಿಡ್ಲಾಪುರ ಉಪನ್ಯಾಸ ನೀಡಿದರು.ಎಂ.ಎಸ್.ಕೋರಿಶೆಟ್ಟರ್, ಸುಲೋಚನಾ ನಂದಿ, ಡಾ.ವಿ.ಪಿ.ದ್ಯಾಮಣ್ಣವರ, ಈರಣ್ಣ ಬೆಳವಡಿ, ಎಸ್.ಆರ್.ಹಿರೇಮಠ, ಹನುಮಂತಗೌಡ ಗೊಲ್ಲರ, ಸಿ.ಎಸ್.ಮರಳಿಹಳ್ಳಿ, ಸುಭಾಷ್ ಕುರುಬರ, ರಾಜೇಂದ್ರ ಹೆಗಡೆ, ಸಿದ್ದೇಶ್ವರ ಹುಣಸಿಕಟ್ಟಿಮಠ, ಶಕುಂತಲಾ ದಾಳೇರ, ರೇಣುಕಾ ಗುಡಿಮನಿ, ಅಕ್ಕಮಹಾದೇವಿ ಹಾನಗಲ್ಲ, ಜುಬೇದಾ ನಾಯ್ಕ್, ಡಾ.ಗೀತಾ ಸುತ್ತಕೋಟಿ ಉಪಸ್ಥಿತರಿದ್ದರು.
ಪರಿಷತ್ತಿನ ತಾಲೂಕಾಧ್ಯಕ್ಷ ವೈ.ಬಿ.ಆಲದಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎಂ.ಓಂಕಾರಣ್ಣವರ ನಿರೂಪಿಸಿದರು. ಬಿ.ಪಿ.ಶಿಡೇನೂರ ಸ್ವಾಗತಿಸಿದರು. ಅರಳಿಕಟ್ಟಿ ಗೂಳಪ್ಪ ವಂದಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...