ನೇರಪಾವತಿಗೆ ಆಗ್ರಹಿಸಿ ಫೆ.೧೫ ರಂದು ಹೊರಗುತ್ತಿಗೆ ನೌಕರರ ನಡಿಗೆ ಸಿಎಂ ಮನೆ ಕಡೆಗೆ
ಹಾವೇರಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಪೌರಚಾಲಕರು, ನೀರುಗಂಟಿಗಳು, ಲೋಡರ್ಸ್, ಕ್ಲೀನರ್ಸ್, ಹೆಲ್ಸರ್ಸ್, ಯೂಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಬಗೆಯ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸುವಂತೆ ಬಜೆಟ್‌ನಲ್ಲಿ ಘೋಷಣೆ ಮಾಡಲು ಒತ್ತಾಯಿಸಿ ಫೆ-೧೫ ರಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಹಾವೇರಿಜಿಲ್ಲೆಯಿಂದ ೧೪೦ಕ್ಕೂ ಅಧಿಕ ಹೊರಗುತ್ತಿಗೆ ನೌಕರರ ಭಾಗವಹಿಸುವರೆಂದು ಸಂಘದ ಜಿಲ್ಲಾ ಅಧ್ಯಕ್ಷ ರಾಜಪ್ಪ ಹೊಸಮನಿ ತಿಳಿಸಿದ್ದಾರೆ.
ಈವರೆಗೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸರಕಾರದ ಸ್ಪಂದನೆ ಇಲ್ಲವಾಗಿದೆ. ಈ ನೌಕರರನ್ನು ನೇರಪಾವತಿಗೆ ತರುವುದರಿಂದ ಸರಕಾರಕ್ಕೆ. ಜಿಎಸ್‌ಟಿ ಉಳಿತಾಯದ ಜತೆಗೆ ನೌಕರರಿಗೆ ಸೇವಾಭದ್ರತೆಯು ದೊರಕಲಿದೆ. ಏಜೆನ್ಸಿಗಳ ಕಿರುಕುಳವು ನಿಲ್ಲಲಿದೆ. ಇದಲ್ಲದೆ ಈ ಎಲ್ಲ ನೌಕರರು ಕರ್ನಾಟಕ ಮುನಿಸಿಪಲ್ ಕಾಯ್ದೆ ಪ್ರಕಾರ ಪೌರಕಾರ್ಮಿಕರೆ ಆಗಿದ್ದಾರೆ. ಇದಲ್ಲದೆ ೨೦೨೨ ಜುಲೈ೦೧ ರಲ್ಲಿ ಅಂದಿನ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕಾರ್ಮಿಕರನ್ನು ನೇರಪಾವತಿಗೆ ತರಲು ಅಗತ್ಯ ತೀರ್ಮಾನವು ಆಗಿದೆ. ಆದರೆ ಅಧಿಕಾರಿಗಳ ತಾರತಮ್ಯ ನೀತಿಯಿಂದಾಗಿ ಈ ಯಾವ ತೀರ್ಮಾನವು ಜಾರಿಗೆ ಬರುತ್ತಿಲ್ಲ. ನಗರಾಭಿವೃದ್ಧಿ ಇಲಾಖೆಯು ಈ ಕಾರ್ಮಿಕರ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ.
ಈ ಹಿನ್ನೆಲೆಯಲ್ಲಿ ನಮ್ಮ ಬೇಡಿಕೆಗಳಾದ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್ ನಲ್ಲಿ ಘೋಷಣೆ ಮಾಡಬೇಕು,ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅವಶ್ಯಕತೆಗನುಗುಣವಾಗಿ ಪೌರಚಾಲಕ ಹುದ್ದೆಗಳನ್ನು ಸೃಷ್ಟಿಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹೊರಗುತ್ತಿಗೆ ಕಾರ್ಮಿಕರು ಫೆ.೧೫ ರಂದು ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
.

Date: