ಬಿಜೆಪಿ ಕೀಳುಮಟ್ಟದ ರಾಜಕಾರಣ: ಶಾಸಕ ಮಾನೆ: ಆಕ್ರೋಶ
ಹಾನಗಲ್: ಸುದೀರ್ಘ ಹಲವು ದಶಕಗಳ ಕಾಲ ಕಳಂಕ ರಹಿತ ರಾಜಕಾರಣದಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಎದುರಿಸುವ ಸಾಮರ್ಥ್ಯ ಇಲ್ಲದ ಕಾರಣ ಬಿಜೆಪಿ ಕೀಳುಮಟ್ಟದ ರಾಜಕಾರಣದಲ್ಲಿ ತೊಡಗಿದ್ದು, ರಾಜ್ಯಪಾಲರ ಕಚೇರಿಯನ್ನೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಭಾನುವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಕಳೆದ ಬಾರಿ ಮತ್ತು ಈ ಬಾರಿ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ಬಡವರು, ಶಕ್ತಿಹೀನರಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಆರ್ಥಿಕ ಸದೃಢತೆ ತಂದುಕೊಡುವ ಕೆಲಸ ಮಾಡಿದ್ದಾರೆ. ಅನ್ನಭಾಗ್ಯದಂಥ ಕಾರ್ಯಕ್ರಮದ ಮೂಲಕ ಅನ್ನರಾಮಯ್ಯ ಎನ್ನುವ ಹಿರಿಮೆಗೆ ಪಾತ್ರರಾಗಿದ್ದು, ಎಲ್ಲ ವರ್ಗಗಳ ಬಂಧುಗಳ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿ ಜನಾನುರಾಗಿ ಎನಿಸಿಕೊಂಡಿದ್ದಾರೆ. ನೇರ ನಡೆ, ನುಡಿಯ ಮೂಲಕ ಇದ್ದಿದ್ದನ್ನು ಇದ್ದಂತೆ ನೇರವಾಗಿ ಹೇಳುವ ಛಾತಿ ಹೊಂದಿರುವ ಸಿದ್ದರಾಮಯ್ಯ ಅವರನ್ನು ಕುಗ್ಗಿಸಲು ರಾಜ್ಯಪಾಲರ ಮೂಲಕ ಅನಾವಶ್ಯಕವಾಗಿ ಶೋಕಾಸ್ ನೋಟಿಸ್ ನೀಡಿ ರಾದ್ಧಾಂತ ಸೃಷ್ಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯ ನೀಚ ರಾಜಕಾರಣವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜಭವನ, ಸ್ವತಂತ್ರ ತನಿಖಾ ಸಂಸ್ಥೆಗಳನ್ನೆಲ್ಲ ಬಿಜೆಪಿ ವಿರೋಧ ಪಕ್ಷಗಳ ಮುಖಂಡರನ್ನು ಹತ್ತಿಕ್ಕಲು ಮತ್ತು ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದುರ್ಬಳಕೆ ಮಾಡಿಕೊಳ್ಳುತ್ತಾ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುತ್ತಿದೆ. ಇಂಥ ನಡತೆಯನ್ನು ರಾಜ್ಯದ ಜನತೆ ಎಂದೂ ಒಪ್ಪುವುದಿಲ್ಲ. ಜನಪರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಾವೆಲ್ಲರೂ ಗಟ್ಟಿಯಾಗಿ ನಿಂತಿದ್ದೇವೆ ಎಂದು ಶಾಸಕ ಮಾನೆ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಗಂಭೀರ ಆರೋಪಗಳಿವೆ. ಅವರ ಮೇಲಿನ ಭ್ರಷ್ಟಾಚಾರದ ಪ್ರಕರಣಗಳೆಲ್ಲವೂ ನ್ಯಾಯಾಲಯದಲ್ಲಿದೆ. ಇಂಥದವರು ಪಕ್ಷದ ವೇದಿಕೆಗೆ ಬರಬಾರದು. ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದು ಸ್ವತಃ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಿತ್ಯವೂ ಆರೋಪಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿನ ಸಾವಿರಾರು ಕೋಟಿ ಭ್ರಷ್ಟಾಚಾರದ ವಿರುದ್ಧ ಸ್ವಪಕ್ಷದವರ ವಿರುದ್ಧವೇ ಧ್ವನಿ ಎತ್ತಿದ್ದಾರೆ. ಇವರ ಆರೋಪಗಳಿಗೆ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಮುಂದಾದ ನಾಯಕರು ಉತ್ತರ ನೀಡಲಿ ಎಂದು ಶ್ರೀನಿವಾಸ ಮಾನೆ ಸವಾಲು ಹಾಕಿದ್ದಾರೆ.
ಬಿಜೆಪಿ ಕೀಳುಮಟ್ಟದ ರಾಜಕಾರಣ: ಶಾಸಕ ಮಾನೆ ಆಕ್ರೋಶ
Date: