ಭರಡಿ – ಮರಡೂರ ಗ್ರಾಮಗಳ ಸ್ಮಶಾನದ ಭೂಮಿ /ದಾರಿ ಸಮಸ್ಯೆ ಶೀಘ್ರ ಪರಿಹರಿಸಲು -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಸೂಚನೆ

Date:

ಭರಡಿ – ಮರಡೂರ ಗ್ರಾಮಗಳ ಸ್ಮಶಾನದ ಭೂಮಿ /ದಾರಿ ಸಮಸ್ಯೆ ಶೀಘ್ರ ಪರಿಹರಿಸಲು
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಸೂಚನೆ
ಹಾವೇರಿ: ಭರಡಿ ಹಾಗೂ ಮರಡೂರ ಗ್ರಾಮಗಳ ಸ್ಮಶಾನದ ಭೂಮಿ ಹಾಗೂ ದಾರಿ ಸಮಸ್ಯೆ ಶೀಘ್ರ ಪರಿಹರಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಸಭೆಯಲ್ಲಿ ಸ್ಮಶಾನದ ಭೂಮಿ ವಿಷಯ ಚರ್ಚೆ ಮಾಡಲಾಗಿದ್ದು, ಕೂಡಲೇ ಇತ್ಯರ್ಥ ಮಾಡುವಂತೆ ಸೂಚಿಸಿದರು.
ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಹೆಚ್ಚಿನ ಗಮನಹರಿಸಬೇಕು. ಸ್ಮಶಾನದ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ಸ್ಮಶಾನಕ್ಕೆ ಹೋಗಲು ದಾರಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಕೂಡಲೇ ಜಮೀನು ಗುರುತಿಸಬೇಕು. ಈ ಸಭೆಯ ಗಮನಕ್ಕೆ ತರಲಾದ ಎಲ್ಲ ಸಮಸ್ಯೆಗಳನ್ನು ಆದ್ಯತೆ ಮೇರಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿ,
ಯಾವ ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಮಾಹಿತಿ, ಗುತ್ತಲದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ, ಬಾಳಂಬೀಡ ಗ್ರಾಮದಲ್ಲಿ ಎಸ್ಸಿ ಎಸ್.ಟಿ. ಕಾಲೋನಿಯಲ್ಲಿ ಪಕ್ಕಾ ಗಟಾರ್ ನಿರ್ಮಾಣ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ, ಬರಡಿ-ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಹಾಗೂ ಸನ್ಮಾನಕ್ಕೆ ಹೋಗಲು ರಸ್ತೆ, ಮೆಡ್ಲೇರಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಣ್ಣ ನೀರಾವರಿ ಇಲಾಖೆಯವರು ನಿರ್ಮಾಣ ಮಾಡಿದ ಕಾಲುವೆಯಲ್ಲಿ ನೀರು ನಿಂತು ತೊಂದರೆಯಾಗುತ್ತಿರುವ ಬಗ್ಗೆ, ವಿವಿಧ ಬ್ಯಾಂಕ್‍ಗಳಲ್ಲಿ ಗ್ಯಾರಂಟಿ ಯೋಜನೆ ಹಣ ಸಾಲಕ್ಕೆ ಜಮೆ ತಡೆ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರಿಗೆ ನ್ಯಾಯ ಬೆಲೆ ಅಂಗಡಿ
ಮಂಜೂರಾತಿ ಕ್ರಮಗಳ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆ ಯ 165 ಹೊರಗುತ್ತಿಗೆ ಸಿಬ್ಬಂದಿಗಳ ಪೈಕಿ ಪರಿಶಿಷ್ಟ ಜಾತಿಯ 70 ಹಾಗೂ 19 ಪ. ಪಂಗಡದ ಅಭ್ಯರ್ಥಿ ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಹಾಗೂ ಜಿಲ್ಲೆಯಲ್ಲಿ 464 ನ್ಯಾಯ ಬೆಲೆ ಅಂಗಡಿ ಗಳ್ಳಿದ್ದು, ಈ ಪೈಕಿ 23 ಅಂಗಡಿಗಳು ಪರಿಶಿಷ್ಟ ಜಾತಿ ಹಾಗೂ ಪ. ಪಂಗಡದವರಿಗೆ ಸೇರಿವೆ. ಹೊಸ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡುದರು.
ಸಭೆಗೆ ಗೈರು ಹಾಜರಾದ ಸಣ್ಣ ನೀರಾ ವರಿ ಇಲಾಖೆ ಅಧಿಕಾರಿಗೆ ನೋಟಿಸ್ ಕಳಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶಿವರಾಜ ಹರಿಜನ ಅವರು ಮಾತನಾಡಿ, ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಮುಂಜಾಗ್ರತೆ ಕೈಗೊಳ್ಳುವಂತೆ ಸಭೆಯಲ್ಲಿ ಮನವಿ ಮಾಡಿಕೊಂದರು.
ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ
ಬಸವರಾಜ ಹೆಡಿಗ್ಗೊಂಡ, ಸಂಜಯಗಾಂಧಿ ಸಂಜೀವಣ್ಣ ನವರ, , ಎನ್.ಎಂ. ಗಾಳೆಮ್ಮನವರ, ರಮೇಶ ಕೊರವರ, ಜಗದೀಶ್ ಹರಿಜನ, ಅವರುಗಳು ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ಆದ್ಯತೆ ಮೇರೆಗೆ ಇತ್ಯರ್ಥ್ ಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ಪನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ, ಜನವರಿ -2026 ರಿಂದ ಮಾರ್ಚ್ ಮಾಹೆವರೆಗೆ 16 ಪ್ರಕರಣಗಳು ದಾಖಲಾಗಿದ್ದು, ರೂ.7.50 ಲಕ್ಷ ಪರಿಹಾರ ಮಂಜೂರ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಲ್ ವೈ ಶಿರಕೋಳ, ಜಿಲ್ಲಾ ಪಂಚಾಯತ್ ಉಪ ಕಾರ್ಯ ದರ್ಶಿ ಡಾ. ಪುನೀತ್, ಉಪ ವಿಭಾಗಾಧಿಕಾರಿಗಳಾದ ಶುಭಂ ಶುಕ್ಲಾ, ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಕೂಡಲಮಠ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ ಗಾಂಧಿಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮಾದರಿ ಕಾಲೇಜ್ ಆಗಿ ಆಯ್ಕೆ

 ಹಾವೇರಿ ಗಾಂಧಿಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮಾದರಿ ಕಾಲೇಜ್ ಆಗಿ ಆಯ್ಕೆಹಾವೇರಿ...

ಬಿ.ಎ.ಜೆ.ಎಸ್.ಎಸ್. ಸಂಸ್ಥೆಗೆ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ. ಕುಬೇರಪ್ಪ ಆಯ್ಕೆ

ಬಿ.ಎ.ಜೆ.ಎಸ್.ಎಸ್. ಸಂಸ್ಥೆಗೆ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ. ಕುಬೇರಪ್ಪ ಆಯ್ಕೆ ಹಾವೇರಿ: ನವದೆಹಲಿಯಲ್ಲಿ...

ವೃತ್ತಿ ಶಿಕ್ಷಣ ಪ್ರದರ್ಶನ-ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣ ಅವಕಾಶ-ಜಿ.ಪಂ.ಸಿಇಒ ರುಚಿ ಬಿಂದಲ್

ವೃತ್ತಿ ಶಿಕ್ಷಣ ಪ್ರದರ್ಶನ-ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣ...