ಮಂಜುನಾಥ ಮಡಿವಾಳರ ರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ,
ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಮನವಿ
ಹಾವೇರಿ : ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದ ಟಿಕೆಟ್ ನೀಡಲು ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ ಜ.೧೮ರಂದು ಬೆಂಗಳೂರಿನ ಗೃಹಕಚೇರಿಯಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.
ಹಾವೇರಿ ಲೋಕಸಭಾ ವ್ಯಾಪ್ತಿಯ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ, ಬಿಜೆಪಿ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ತಮ್ಮೆಲ್ಲರ ಆಶೀರ್ವಾದದೊಂದಿಗೆ ಜಯಗಳಿಸುವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ಪಕ್ಷ ಹ್ಯಾಟ್ರಿಕ್ ಗೆಲುವು ಸಾಧಿಸಿ, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಬೇಕಿದೆ. ಬಿಜೆಪಿ ಪಕ್ಷದಲ್ಲಿ ಸಮಾನ್ಯ ಕಾರ್ಯಕರ್ತನಾಗಿ ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿ ಕೆಲಸ ಮಾಡುತ್ತಾ ಬರುತ್ತಿದ್ದೇನೆ.
ಹಾವೇರಿ ಲೋಕಸಭಾ ಕ್ಷೇತ್ರದ ಎಲ್ಲಾ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರ ಮಾಡಿ ಪಕ್ಷದ ಹಿರಿಯರ-ಕಿರಿಯರ ವಿಶ್ವಾಸಗಳಿಸುವ ಪ್ರಯತ್ನ ಮಾಡಿದ್ದೇನೆ. ಬಿಜೆಪಿ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಟಿಕೆಟ್ ನೀಡದರೆ ಕ್ಷೇತ್ರದ ಪಕ್ಷದ ಮುಖಂಡರ-ಕಾರ್ಯಕರ್ತರ ಹಾಗೂ ತಮ್ಮೆಲ್ಲರ ಆಶೀರ್ವಾದ ಪಡೆದು ಗೆಲುವು ಸಾಧಿಸಲಿದ್ದೇನೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥ ಮಡಿವಾಳರ ರಾಜ್ಯಾಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಲೀಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ, ಬಿಜೆಪಿ ಹಾವೇರಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ತಾಂಡೂರ, ನಗರ ಮಂಡಲ ಕಾರ್ಯದರ್ಶಿ ಶಿವಬಸವ ಚೌಶೆಟ್ಟಿ, ಫಕ್ಕಿರೆಡ್ಡಿ ಅತ್ತಿಗೆರೆ, ಭರಮಪ್ಪ ಇಂಗಳಗುಂದಿ ಹಾಗೂ ಬಿಜೆಪಿ ಮುಖಂಡರು-ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಜುನಾಥ ಮಡಿವಾಳರ ರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಮನವಿ
Date: