ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

Date:

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ
ಹಾವೇರಿ : ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಶುಕ್ರವಾರ ಬ್ಯಾಡಗಿ ತಾಲೂಕಿನ ಆಳಲಗೆರಿ ಹಾಗೂ ಕಲ್ಲೆದೇವರ ಗ್ರಾಮಕ್ಕೆ ಭೇಟಿ ನೀಡಿ ರೈತರ ಗೋವಿನಜೋಳ ಬೆಳೆಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ತಾಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗದೆ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿಲ್ಲ. ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಅಗತ್ಯ ಪ್ರಮಾಣದ ತೇವಾಂಶ ದೊರೆಯುತ್ತಿಲ್ಲ. ಹೀಗಾಗಿ ಬೆಳೆಗಳಿಗೆ ಹಾನಿಯಾಗುವ ಆತಂಕ ಎದುರಾಗಿದ್ದು, ಸರ್ಕಾರ ಹಸಿ ಬರ ಘೋ?ಣೆ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ತಾಲೂಕಿನಲ್ಲಿ ಪ್ರಸಕ್ತ ವ? ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆಗಾಗ್ಗೆ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿರುವ ಗೋವಿನಜೋಳ ಬೆಳೆ ಸಮರ್ಪಕವಾಗಿ ಬೆಳೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬೆಳೆ ಇಳುವರಿ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ ಎಂದು ರೈತರು ಸಚಿವರಿಗೆ ತಿಳಿಸಿದರು.
ಮಳೆ ಕೊರತೆಯಿಂದ ರೈತರು ಆರ್ಥಿಕ ಸಂಕ?ಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳೆಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಿ ಹಸಿ ಬರ ಘೋ?ಣೆ ಮಾಡುವಂತೆ ರೈತರು ಒತ್ತಾಯಿಸಿದರು. ರೈತರ ಮನವಿಯನ್ನು ಆಲಿಸಿದ ಸಚಿವರು, ಬೆಳೆ ಪರಿಸ್ಥಿತಿ ಹಾಗೂ ಮಳೆಯ ಪ್ರಮಾಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ವೇಳೆ ಯೂರಿಯಾ ಗೊಬ್ಬರದ ಕೊರತೆ ಬಗ್ಗೆಯೂ ರೈತರು ಸಚಿವರ ಗಮನ ಸೆಳೆದರು. ಬೆಳೆಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ಯೂರಿಯಾ ಗೊಬ್ಬರ ಸಮರ್ಪಕವಾಗಿ ದೊರೆಯುತ್ತಿಲ್ಲ. ಸಮಯಕ್ಕೆ ಸರಿಯಾಗಿ ಗೊಬ್ಬರ ಲಭ್ಯವಾಗದಿದ್ದರೆ ಬೆಳೆಗಳ ಬೆಳವಣಿಗೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಪೂರೈಕೆ ಮಾಡುವಂತೆ ಮನವಿ ಮಾಡಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯವಿರುವ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ರೈತರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಹಿರೇಕೆರೂರು ತಾಲೂಕು ವಿವಿಧ ಗ್ರಾಮಗಳ ಕೆರೆ ವೀಕ್ಷಣೆ ಮಾಡಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್‌ಕುಮಾರ, ಕೃಷಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...

ಹಾವೇರಿಯ ಶೆಟ್ಟಿ ವಿಭೂತಿಗೆ ಮನೆಗೊಂದು ಗ್ರಂಥಾಲಯಕ್ಕಾಗಿ ಪ್ರಶಸ್ತಿ ಘೋಷಣೆ

ಹಾವೇರಿಯ ಶೆಟ್ಟಿ ವಿಭೂತಿಗೆ ಮನೆಗೊಂದು ಗ್ರಂಥಾಲಯಕ್ಕಾಗಿ ಪ್ರಶಸ್ತಿ ಘೋಷಣೆ ಹಾವೇರಿ: ಕನ್ನಡ ಪುಸ್ತಕ...

“ಗಣಿತಯಾವಗಲೂ ಸತ್ಯವನ್ನೇ ಹೇಳುತ್ತದೆ” ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕೋರಗಲ್ ವಿರುಪಾಕ್ಷಪ್ಪ

"ಗಣಿತಯಾವಗಲೂ ಸತ್ಯವನ್ನೇ ಹೇಳುತ್ತದೆ" ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ...

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ

  ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ ಹಾವೇರಿ: ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ...