News Week
Magazine PRO

Company

ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಇನ್ನಿಲ್ಲ

Date:

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಂಸದರಾಗಿದ್ದ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶನಿವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ ಅವರ ಎದುರು ಸೋಲು ಕಂಡಿದ್ದ ಅವರು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದ್ದರು.

ಧ್ರುವನಾರಾಯಣ ಅವರು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದರು.ಧ್ರುವನಾರಾಯಣ ಅವರು ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪಯಣ ಆರಂಭಿಸಿದ್ದರು. ೧೯೮೩ರಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದರು. ೧೯೮೪ ರಲ್ಲಿ, ಅವರು ಬೆಂಗಳೂರಿನ ಹೆಬ್ಬಾಳದ ಕೃಷಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಅದೇ ವರ್ಷದಲ್ಲಿ, ಅವರು ಬೆಂಗಳೂರು ನಗರದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರೂ ಆಗಿದ್ದರು. ೧೯೮೬ ರಲ್ಲಿ ಅವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
೧೯೯೯ ರಲ್ಲಿ, ಅವರು ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸಂತೇರ್ಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದರು, ಅವರು ಸೋತರು. ೨೦೦೪ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ಅವರ ೨೦೦೮ರಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ೧೧,೮೦೦ ಮತಗಳ ಅಂತರದಿಂದ ಗೆದ್ದರು. ಇದಾದ ಬಳಿಕ ಚಾಮರಾಜನಗರ ಕ್ಷೇತ್ರದಿಂದ ೪,೦೨೦ ಮತಗಳ ಅಂತರದಿಂದ ೧೫ನೇ ಲೋಕಸಭೆಗೆ ಆಯ್ಕೆಯಾದರು. ೨೦೧೪ರಲ್ಲಿ ಮತ್ತೊಮ್ಮೆ ೧,೪೧,೧೮೨ ಮತಗಳ ಅಂತರದಿಂದ ಗೆದ್ದು ೧೬ನೇ ಲೋಕಸಭೆಗೆ ಸಂಸದರಾಗಿ ಆಯ್ಕೆಯಾದರು. ೨೦೧೯ ರಲ್ಲಿ, ಧ್ರುವನಾರಾಯಣ ಅವರು ೧೭ ನೇ ಲೋಕಸಭೆ ಚುನಾವಣೆಯಲ್ಲಿ ಶ್ರೀನಿವಾಸ ಪ್ರಸಾದ್ ವಿರುದ್ಧ ೧೨,೭೧೬ ಮತಗಳ ಅಂತರದಿಂದ ಪರಾಭವಗೊಂಡರು.
ಶೋಖ: ಧ್ರುವ ನಾರಾಯಣ ಅವರ ಅಕಾಲಿಕ ಸಾವಿನಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ‘ನಗುಮುಖದ ಗೆಳೆಯ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದ ನಷ್ಟವನ್ನು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ’ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಧ್ರವ ನಾರಾಯಣ ಸಾವಿಗೆ ಕಂಬನಿ ಮಿಡಿದಿರುವ ಕೆಪಿಸಿಸಿ, ‘ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು, ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀಯುತ ಧೃವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ’ ಎಂದು ಹೇಳಿದೆ.
ಧ್ರುವ ನಾರಾಯಣ ಅವರ ಸಾವಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...