ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ-ಸಚಿವ ಶಿವಾನಂದ ಪಾಟೀಲ 

Date:

ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ-ಸಚಿವ ಶಿವಾನಂದ ಪಾಟೀಲ 
ಹಾವೇರಿ:ಜಿಲ್ಲೆಯಲ್ಲಿನ ಎರಡು ಸಕ್ಕರೆ ಕಾರ್ಖಾನೆಗಳಿಂದ ನದಿಗೆ ಹಾಗೂ ರೈತರ ಹೊಲಗಳಿಗೆ ಕಲುಷಿತ ನೀರನ್ನು ಹರಿಸಿರುವ ಬಗ್ಗೆ ಎಸಿ ನೇತ್ರತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ವರದಿ ಬಂದ ನಂತರ ಕಾರ್ಖಾನೆಗಳ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಳ್ಳುವುದು. ಕಾರ್ಖಾನೆಯವರು ತ್ಯಾಜ್ಯ ವನ್ನು ನಿಯಮಾನುಸಾರ ವಿಲೆಮಾಡಲು ಕ್ರಮ ಕೈಗೊಳ್ಳಬೇಕೆಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ಭಾನುವಾರ ಇಲ್ಲಿನ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ೧೦ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಸುಗ್ರೀವಾಜ್ಞೆ ಹೊರಡಿಸಲಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು
ಆರ್.ಬಿ.ಐ.ನಿಂದಲೇ ಮೈಕ್ರೋ ಫೈನಾನ್ಸ್‌ಗಳ ನಿರ್ವಹಣೆಯಾಗಬೇಕು, ಆದರೆ ಸಿಬ್ಬಂದಿ ಕೊರತೆ ಕಾರಣ ಇಂತಹ ಪ್ರಕರಣಗಳು ಕಂಡುಬಂರುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಇತಂಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು.
ರೂ.೧ ಲಕ್ಷ ಸಹಾಯಧನ: ರಸ್ತೆ ಪಘಾತದಲ್ಲಿ ಮೃತಪಟ್ಟ ಸವಣೂರ ತರಕಾರಿ ವ್ಯಾಪರಸ್ಥರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ರೂ.೩ ಲಕ್ಷ ಹಾಗೂ ಕೇಂದ್ರದಿಂದ ರೂ.೨ ಲಕ್ಷ ಸೇರಿ ರೂ. ೫ ಲಕ್ಷ ಪರಿಹಾರ ನೀಡಲಾಗಿದೆ. ಮೃತರ ಮನೆಗೆ ನಿನ್ನೆ ಭೇಟಿ ನೀಡಲಾಗಿದ್ದು, ಕುಟುಂಬ ಪರಿಸ್ಥಿತಿ ಗಂಭೀರವಾಗಿದೆ. ನಾನು ಹಾಗೂ ಶಾಸಕರು ಸೇರಿ ರೂ. ೧ ಲಕ್ಷ ವೈಯಕ್ತಿವಾಗಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿ ಕಿಮ್ಸ್‌ಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ೧೩ ಜನರ ಆರೋಗ್ಯ ವಿಚಾರಲಾಗಿದ್ದು, ಯಾರಿಗೂ ಅಂಗವಿಕಲತೆ ಉಂಟಾಗಿಲ್ಲ. ಆದರೆ ಇನ್ನೊಂದುವರೆ ತಿಂಗಳು ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ತಿಳಿಸಿದರು.
ಪಡಿತರ ವಿತರಣೆಗೆ ಬಳಸುವ ಜೋಳ ಕಳಪೆಯಾಗಿದೆ ಎಂದು ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಸಂಬಂದಪಟ್ಟ ಸಚಿವರೊಂದಿಗೆ ಚರ್ಚೆ ಮಾಡಲಾಗಿದೆ. ೨೦೧೯ ರಿಂದ ಹಿಂಗಾರು ಜೋಳ ಖರೀದಸಲಾಗುತ್ತಿದೆ, ಈ ಕುರಿತು ಮೊದಲು ಧ್ವನಿ ಎತ್ತಿದ್ದೇ ನಾನು. ಮುಂದಿನ ದಿನಗಳಲ್ಲಿ ಉತ್ತಮ ಜೋಳದ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಎಪಿಎಂಸಿಗಳ ಅಭಿವೃದ್ಧಿ: ಮೊದಲು ಎಪಿಎಂಸಿಗಳ ಅಭಿವೃದ್ಧಿಗೆ ಅನುದಾನದ ಕೊರೆತ ಇತ್ತು. ಈಗ ಹಾಗಿಲ್ಲ, ರೂ.೪೫೦ ಕೋಟಿ ಆದಾಯದ ನಿರೀಕ್ಷೆ ಇತ್ತು, ಈವರೆಗೆ ರೂ.೩೬೦ ಕೋಟಿ ಸಾಧನೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ನಾಯಿ ಕಡಿತ ಹಾವಳಿ, ನದಿಗೆ ಕಲುಷಿತ ನೀರು , ಅಂಗನವಾಡಿ ಅನುದಾನ ಅವ್ಯವಹಾರ ಕುರಿತು ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...