ವಂಶವೃಕ್ಷ ನೀಡಲು ಲಂಚ-ಉಪ‌ತಹಶೀಲ್ದಾರ, ಕಂಪ್ಯೂಟ‌ರ್ ಆಪರೇಟ‌ರ್ ಲೋಕಾ ಬಲೆಗೆ

Date:

ಹಾವೇರಿ: ವಂಶವೃಕ್ಷ ನೀಡಲು ಲಂಚ ಪಡೆದ ಆರೋಪದಡಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯ ಉಪ ತಹಶೀಲ್ದಾ‌ರ್ ನಾಗರಾಜ ಸೂರ್ಯವಂಶಿ ಹಾಗೂ ಕಂಪ್ಯೂಟ‌ರ್ ಆಪರೇಟ‌ರ್ ಕಿರಣ ಮುದಕಣ್ಣನವರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗಂಗಾಧರ ರಾಮಪ್ಪ ಕ್ಯಾತನಕೇರಿ ಎಂಬುವವರು ಲಂಚದ ಬಗ್ಗೆ ಲೋಕಾಯುಕ್ತ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ದೂರುದಾರ ಗಂಗಾಧರ ಅವರ ಸಂಬಂಧಿ ದಯಾನಂದ ರುದ್ರಪ್ಪ ಯಲಿಗಾರ ಅವರು ತಮ್ಮ ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಉಪ ತಹಶೀಲ್ದಾ‌ರ್ ನಾಗರಾಜ ಹಾಗೂ ಕಂಪ್ಯೂಟ‌ರ್ ಆಪರೇಟರ್ ಕಿರಣ ಮುದಕಣನವರ ವಂಶವೃಕ್ಷ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಬ್ಬರೂ ಆರೋಪಿಗಳು, ನಾಡಕಚೇರಿಯಲ್ಲಿಯೇ ದೂರುದಾರರಿಂದ ಗುರುವಾರ ₹2,000 ಲಂಚ ಪಡೆದಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ, ಹಣದ ಸಮೇತ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರನ್ನೂ ಬಂಧಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್‌ ಡಿವೈಎಸ್ಪಿ ಮಧುಸೂದನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...