ವಿಧಾನ ಪರಿಷತ್ ಕಚೇರಿಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡಿದರೆ ಶಿಸ್ತು ಕ್ರಮ: ಬಸವರಾಜ ಹೊರಟ್ಟಿ
ಹಾವೇರಿ: ಕನ್ನಡ ನಮ್ಮ ಮಾತೃಭಾಷೆ. ಕನ್ನಡವನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕೆಲಸ ಹಾವೇರಿ ಜಿಲ್ಲೆಯಿಂದಲೇ ಆರಂಭಗೊಳ್ಳಬೇಕಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡೋಣ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ ರಾಜ್ಯ ಸಮಿತಿಯಿಂದ ಸೋಮವಾರ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಿರ್ಮಿಸಿದ ಹಿರಿಯ ಸಾಹಿತಿ ದಿ.ಗಂಗಾಧರ ನಂದಿ ಪ್ರಧಾನ ವೇದಿಕೆಯಲ್ಲಿ ಆಯೋಜಿಸಿದ್ದ ಎರಡನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡವನ್ನು ಆಡಳಿತ ಭಾಷೆಯಾಗಿ ಹಾಗೂ ಭಾರತದ ಶಾಸ್ತ್ರೀಯ ಭಾಷೆಯಾಗಿ ಗುರುತಿಸಲಾಗಿದೆ. ಕನ್ನಡಕ್ಕಾಗಿ ಎಷ್ಟೋ ಜನ ಮಹನೀಯರು ತಮ್ಮ ಜೀವವನ್ನೇ ಕೊಟ್ಟಿದ್ದಾರೆ. ಆದರೂ ನಮಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನವಿಲ್ಲ. ತಮಿಳುನಾಡಿನಲ್ಲಿ ತಮಿಳು, ಮಹಾರಾಷ್ಟ್ರದಲ್ಲಿ ಮರಾಠಿ ಬೋರ್ಡ್‌ಗಳು ಇವೆ. ಆಯಾ ರಾಜ್ಯಗಳಲ್ಲಿ ಭಾಷಾಭಿಮಾನ ಬಹಳ ಇದೆ. ಆದರೆ, ಅಲ್ಲಿರುವ ಅಭಿಮಾನ ಕರ್ನಾಟಕ ಮಾತೃಭಾಷೆ ಮಾತನಾಡುವ ನಮಗೇಕೆ ಇಲ್ಲ ಎಂದು ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಶೇ.೨೩ರಷ್ಟು ಮಾತ್ರ ಕನ್ನಡ ಭಾಷೆ ಮಾತನಾಡುವ ಜನರು ಇದ್ದಾರೆ. ಬೆಳಗಾವಿಯಲ್ಲೂ ಕನ್ನಡ ಮಾತನಾಡುತ್ತಾರೆ. ಆದರೆ ಬಹುಪಾಲು ಜನ ನಮ್ಮವರೇ ಬೇರೆ ಭಾಷೆ ಮಾತನಾಡುತ್ತಾರೆ. ಅಲ್ಲಿಯ ಶಾಸಕರು ಸಹಿತ ಮರಾಠಿ ಮಾತನಾಡುವುದು ವಿಪರ್ಯಾಸ ಎಂದ ಅವರು, ವಿಧಾನ ಪರಿಷತ್ ಕಚೇರಿಯಲ್ಲಿರುವ ಎಲ್ಲರೂ ಸರಕಾರಿ ಅವಧಿಯಲ್ಲಿ ಕನ್ನಡವನ್ನೇ ಮಾತನಾಡಬೇಕು. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬ ಆದೇಶ ಹೊರಡಿಸಿದ್ದೇವೆ ಎಂದರು.
ಕೆಪಿಎಸ್‌ಗೆ ವಿರೋಧ: ರಾಜ್ಯ ಸರಕಾರ ಗ್ರಾಮೀಣ ಭಾಗಗಳಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆದು, ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ. ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ. ಪ್ರತಿ ಹಳ್ಳಿಯಲ್ಲಿ ಕನಿಷ್ಠ ೫ನೇ ತರಗತಿ ವರೆಗೆ ಕನ್ನಡ ಶಾಲೆ ಇರಬೇಕು. ಒಂದುವೇಳೆ ಹಳ್ಳಿಯಲ್ಲಿ ಕೆಪಿಎಸ್ ಶಾಲೆ ಮಾಡಿದರೆ, ಒಂದೇ ಕಾಂಪೌಂಡ್‌ನಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜು ಶಿಕ್ಷಣ ಕೊಡಿಸಲಾಗುತ್ತದೆ. ಆದರೆ ಇದು ಅನುಷ್ಠಾಗೊಂಡರೆ ಎಲ್ಲಾ ಗ್ರಾಮಗಳಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತವೆ. ಇದರಿಂದ ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲು ಶಾಲೆಗಳೇ ಇರುವುದಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರು ಬೇರೆ ಕಡೆ ಹೋಗುತ್ತಾರೆ, ಜತೆಗೆ ಡಿಎಡ್, ಬಿಎಡ್ ಮಾಡಿದ ಶಿಕ್ಷಕರಿಗೆ ಉದ್ಯೋಗವೇ ಸಿಗುವುದಿಲ್ಲ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.
ಎಲ್ಲರೂ ಒಗ್ಗಟ್ಟಾಗಬೇಕು: ತಾಯಂದಿರು, ಪೋಷಕರು ತಮ್ಮ ಮಕ್ಕಳನ್ನು ಕೆಪಿಎಸ್ ಶಾಲೆಗೆ ಕಳುಹಿಸಲೇಬೇಡಿ. ಕನ್ನಡ ಭಾಷೆ ಅಳಿವು ಉಳಿವು ನಮ್ಮ ಕೈಯಲ್ಲಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಬಿಡಬಾರದು. ನಾನು ಹೃದಯದಿಂದ ಈ ಮಾತನ್ನು ಮಾತನಾಡುತ್ತಿದ್ದೇನೆ. ಆದರೆ ಎಲ್ಲ ರೀತಿಯಿಂದಲೂ ಕನ್ನಡದ ಕಟ್ಟಾಳುಗಳ ಜತೆಗೆ ಇರುತ್ತೇನೆ. ಕನ್ನಡ ಶಾಲೆಗೆ ಬಂದ್ ಮಾಡುವ ಕೆಲಸಕ್ಕೆ ಯಾರೇ ಮುಂದಾದರೂ ಸಹಿಸಬಾರದು. ಕನ್ನಡಪರ ಸಂಘಟನೆಗಳು, ಕರುನಾಡ ಕನ್ನಡ ಸಾಹಿತ್ಯ ಸಂಘಟನೆಯು ವಿರೋಸಿ ಕೋರ್ಟ್‌ಗೆ ಕೇಸ್ ಹಾಕಿಸಬೇಕು. ನಿಮ್ಮ ಪರವಾಗಿ ನಾವು ಇರುತ್ತೇನೆ ಎಂದರು.
ಸಮ್ಮೇಳನದ ಸರ್ವಾಧ್ಯಕ್ಷ ಜಿ.ಎಂ ಓಂಕಾರಣ್ಣನವರ ಮಾತನಾಡಿ ರಾಜ್ಯ ಹಾಗೂ ಜಿಲ್ಲೆಯಲ್ಲಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಕಲಿಯಬೇಕು. ಮನೆಯಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಹೆಚ್ಚು ಬಳಸಿ, ಮಾತನಾಡಿ ಉಳಿಸಿ ಬೆಳೆಸಬೇಕು. ಕನ್ನಡ ಶಾಲೆಗಳು ಕಡ್ಡಾಯವಾಗಿ ಉಳಿಯಬೇಕು. ಜಿಲ್ಲೆಯಲ್ಲಿ ಅನೇಕ ಸಾಹಿತಿಗಳು ಇದ್ದು, ಹಾವೇರಿ ಜಿಲ್ಲೆ ಸಮೃದ್ಧಿ ಸಾಹಿತ್ತಿಕ ಕ್ಷೇತ್ರವಾಗಿದೆ. ಇಂತಹ ನಾಡಿನಲ್ಲಿ ಹುಟ್ಟಿದ್ದು ನನ್ನ ಪುಣ್ಯ. ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿರುವುದು ನನ್ನ ಸುಧೈವ. ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗಕ್ಕೆ ಕೃತಜ್ಞತೆ ಸಲ್ಲಿಸಿದರು.
ಕರುನಾಡ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗದ ಸಂಸ್ಥಾಪಕ ಅಧ್ಯಕ್ಷ ಎಸ್.ಡಿ ಮುಡೆಣ್ಣವರ ಮಾತನಾಡಿ ಸರಕಾರಿ, ಅನುದಾನಿತ, ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳು ರಾಜ್ಯದಲ್ಲಿ ಉಳಿಯಲೆಬೇಕು. ಕನ್ನಡ ಶಾಲೆಗಳು ಮುಚ್ಚಲು ಬಿಡಬಾರದು. ಪ್ರತಿಯೊಬ್ಬರ ಮನೆ ಮನಗಳಲ್ಲಿ ಕನ್ನಡದ ದೀಪ ಹಚ್ಚಬೇಕು. ಕನ್ನಡವೇ ಉಸಿರು, ಕನ್ನಡವೇ ಹಸಿರಾಗಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಮಾತನಾಡಿ ನಮ್ಮ ಮನೆಯಿಂದಲೇ ಕನ್ನಡ ಭಾಷೆಯ ಕೊಲೆಯಾಗುತ್ತಿರುವದು ದುರ್ದೈವ. ಮನೆಯಲ್ಲಿ ಮಕ್ಕಳಿಗೆ ಮಮ್ಮಿ, ಡ್ಯಾಡಿ ಎಂದು ಹೇಳಿಕೊಡುತ್ತೇವೆ. ಅಪ್ಪ, ಅವ್ವ ಎಂದು ಹೇಳುತ್ತಿಲ್ಲ. ಕನ್ನಡ ನಮ್ಮ ತಾಯಿ ತಂದೆ. ಕನ್ನಡ ಭಾಷೆಗೆ ಗೌರವ ಕೊಡಬೇಕು. ಕನ್ನಡವೇ ನಮ್ಮ ಹೃದಯ. ಕನ್ನಡ ಭಾಷೆ ಮತ್ತು ಭಾರತೀಯ ಸಂಸ್ಕೃತಿ ಉಳಿಸಬೇಕು. ತಾಯಂದಿರು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಅಭಿಮಾನ ಮೂಡಿಸಬೇಕು ಎಂದರು.
– .

—