ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನ.೧೩ಕ್ಕೆ ಘೋಷಣೆ
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ೩ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಶಿಗ್ಗಾಂವಿ, ಸಂಡೂರು, ಚನ್ನಟ್ಟಣ ಹಾಗೂ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ ೧೩ ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ ೨೩ ರಂದು ಮತಎಣಿಕೆ ನಡದು ಫಲಿತಾಂಶ ಘೋಷಣೆಯಾಗಲಿದೆ.
ಕರ್ನಾಟಕ ಉಪ ಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ ೧೮ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೨೫ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ ೨೮ಕ್ಕೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ ೩೦ ಕೊನೆಯ ದಿನವಾಗಿದೆ.
ಶಿಗ್ಗಾಂವಿ ಕ್ಷೇತ್ರದಿಂದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಸಭಾ ಚುನಾವಣೆ ವೇಳೆ ಹಾವೇರಿ ಕ್ಷೇತ್ರದಿಂದ ಗೆದ್ದ ಸಂಸದರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿರುವ ಶಿಗ್ಗಾಂವ ವಿಧಾನಸಭಾ ಕ್ಷೇತ್ರಕ್ಕೆ ಇದೀಗ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆಮಾಡಿದೆ.

Date: