
ಹಾವೇರಿ: ಹಾವೇರಿಯ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪ್ರಥಮ ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಹೊಸ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಸಹ ಕಲ್ಪಿಸಲಾಗಿದೆ. ಶೀರ್ಘದಲ್ಲಿಯೇ ಲ್ ಕಾಲೇಜು ಉದ್ಘಾಟನೆನೆರವೇರಿಸಲಾಗುವುದು ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.
ಎಂದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತವಾಗಿ ನಡೆಯುತ್ತಿವೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕ್ರಮಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಆಣೂರು, ತಡಸ, ಹಂಸಭಾವಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಗ್ರಾಮೀಣ ೪೫೧ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದರು.
ಹಾವೇರಿ ನಗರದ ಕುಡಿಯುವ ನೀರಿನ ಯೋಜನೆಗೆ ವೆಚ್ಚ ಮಾಡದ ರೂ.೩೧ ಕೋಟಿ ಹಣದ ಸದುಪಯೋಗದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಸಂಪೂರ್ಣ ವರದಿ ಬಂದ ನಂತರ ಮಾಹಿತಿ ನೀಡಲಾಗುವುದು. ಜಿಲ್ಲೆಯಲ್ಲಿ ಶೇ.೬೦ ರಿಂದ ೬೫ ರಷ್ಟು ಕೆರೆಗಳನ್ನು ತುಂಬಿಸಲಾಗಿದೆ ಎಂದರು.
ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೇರಿಸಲಾಗುತ್ತಿದೆ, ಶೀಘ್ರದಲ್ಲೇ ಎಂ.ಐ.ಆರ್. ಯಂತ್ರೋಪಕರಣ ಬರಲಿದೆ, ಕಟ್ಟಡಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸಹ ಕ್ರಮವಹಿಸಲಾಗುವುದು ಎಂದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಎಸ್.ಆರ್.ಪಾಟೀಲ ಉಪಸ್ಥಿತರಿದ್ದರು.