ಸಿ.ಎಮ್. ಬಸವರಾಜ ಬೊಮ್ಮಾಯಿ ಅವರಿಂದ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿಜ.೬,೭ ಮತ್ತು ೮ರಂದು ನಡೆಯುವ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಹಾವೇರಿ ಜಿಲ್ಲೆಯ ಶಿಗ್ಗಾವಿಯ ಮರಾಠ ಭವನದ ಶಂಕುಸ್ಥಾಪನೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ,
ಸಿಇಒ ಮಹಮ್ಮದ್ ರೋಷನ್,
ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕ ಕಸಾಪ ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಮತ್ತಿತರರು ಭಾಗವಹಿಸಿದ್ದರು