ಹಾವೇರಿಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯ ಪಕ್ಕದಲ್ಲೇ ಮಲಗಿ ಅಸಭ್ಯ ವರ್ತನೆ; ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ-ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕಕ್ಕೆಆಗ್ರಹಹಾವೇರಿ: ಇಲ್ಲಿನಜಿಲ್ಲಾ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ರೋಗಿಗಳ ಸುರಕ್ಷತೆಗೆ ಯಾವುದೇ ಭರವಸೆ ಇಲ್ಲದಂತಾಗಿದೆ. ರಾತ್ರಿ ಕತ್ತಲಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ರೋಗಿಗಳು ಹಾಗೂ ಅವರ ಸಂಬಂಧಿಕರು ಆತಂಕದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಸಾಕ್ಷಿ ಎಂಬಂತೆ, ವ್ಯಕ್ತಿ ಯೋರ್ವಆಸ್ಪತ್ರೆಯ ಕೊಠಡಿಯೊಂದರಲ್ಲಿ ನಿದ್ರಿಸುತ್ತಿದ್ದ ಮಹಿಳೆಯ ಪಕ್ಕದಲ್ಲೇ ಮಲಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೂರ್ನಾಲ್ಕು ದಿನಗಳ ಹಿಂದೆ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಜಿಲ್ಲಾ ಆಸ್ಪತ್ರೆಯ 109ನೇ ಕೊಠಡಿಗೆ ನುಗ್ಗಿದ ಅನಾಮಧೇಯ ವ್ಯಕ್ತಿಯೊಬ್ಬ, ಹಾಸಿಗೆಯಲ್ಲಿ ನಿದ್ರಿಸುತ್ತಿದ್ದ ಮಹಿಳೆಯನ್ನೇ ಗುರಿಯಾಗಿಸಿಕೊಂಡಿದ್ದಾನೆ. ಮಹಿಳೆ ಮಲಗಿದ್ದ ಹಾಸಿಗೆಯೊಳಗೆ ಮೆಲ್ಲನೆ ನುಸುಳಿದ ವ್ಯಕ್ತಿ, ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ.
ಈ ವೇಳೆ ಎಚ್ಚರಗೊಂಡ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದು, ತಕ್ಷಣವೇ ದುಷ್ಕರ್ಮಿಗೆ ಕೆನ್ನೆಗೆ ಬಾರಿಸಿದ್ದಾಳೆ. ಮಹಿಳೆಯ ಕಿರುಚಾಟದಿಂದ ಗಾಬರಿಗೊಂಡ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ.
ಇನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ 10ಕ್ಕೂ ಅಧಿಕ ಮೊಬೈಲ್ಗಳು ಕಳ್ಳತನವಾಗಿವೆ ಎಂಬ ಆರೋಪವೂ ಕೇಳಿಬಂದಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಮೊಬೈಲ್, ಹಣ ಹಾಗೂ ಬೆಲೆಬಾಳುವ ವಸ್ತುಗಳ ಸುರಕ್ಷತೆ ಬಗ್ಗೆ ಚಿಂತಿಸುವಂತಾಗಿದೆ.
ರಾತ್ರಿ ಭದ್ರತೆಗೆ ಸಿಬ್ಬಂದಿ ಕೊರತೆಯೇ ಕಾರಣ?
ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಲ್ಲಿಯೇ ಇಂತಹ ಘಟನೆಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ಸಮರ್ಪಕ ಭದ್ರತಾ ಸಿಬ್ಬಂದಿ ನಿಯೋಜಿಸದಿರುವುದೇ ಇಂತಹ ಘಟನೆಗಳಿಗೆ ಕಾರಣವೇ ಎಂಬ ಪ್ರಶ್ನೆ ಉದ್ಭವಿಸಿದೆ.
ಆಸ್ಪತ್ರೆಯಲ್ಲಿ ಪದೇಪದೇ ಕಳ್ಳತನದ ಘಟನೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಮಹಿಳೆಯರ ಸುರಕ್ಷತೆಗೂ ಆದ್ಯತೆ ನೀಡದಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳು ನೆಮ್ಮದಿಯಿಂದ ಇರುವುದಾದರೂ ಹೇಗೆ ಎಂಬ ಪ್ರಶ್ನೆಯೂ ಎದುರಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ರಾತ್ರಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಾವೇರಿಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯ ಪಕ್ಕದಲ್ಲೇ ಮಲಗಿ ಅಸಭ್ಯ ವರ್ತನೆ; ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ-ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕಕ್ಕೆಆಗ್ರಹ
Date:


