ಹಾವೇರಿ:ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಅವಶ್ಯ—ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ

Date:

ಹಾವೇರಿ:ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರು ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಜರುಗಿದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಈ ವರ್ಷದ ಘೋಷವಾಕ್ಯವಾಗಿದ್ದು, ಪ್ರತಿನಿತ್ಯ ಯೋಗಾಭ್ಯಾಸ ರೂಢಿಸಿಕೊಂಡರೆ ರೋಗಮುಕ್ತರಾಗಬಹುದು ಹಾಗೂ ಮಾನಸಿಕ, ದೈಹಿಕ ಸದೃಢತೆ ಸಾಧಿಸಬಹುದು. ಪ್ರಾಚೀನ ಕಾಲದಿಂದಲೂ ಋಷಿಮುನಿಗಳು ಯೋಗಾಭ್ಯಾಸದಿಂದ ನೂರಾರು ವರ್ಷ ಬದುಕಿದ ಉದಾಹರಣೆಗಳಿವೆ. ಹಾಗಾಗಿ ಮಕ್ಕಳು ಬಾಲ್ಯದಲ್ಲೇ ಯೋಗಾಭ್ಯಾಸ ರೂಢಿಸಿಕೊಂಡರೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಲತಾ ಬಿ.ಎಸ್., ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ವರ ಬಡಿಗೇರ, ಲೀಲಾಜಿ, ಆಯುಷ್ ಇಲಾಖೆ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಸಿ.ನಿಡಗುಂದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ನಾಗರಾಜ ನಡುವಿನಮಠ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಆಸನಗಳ ಪ್ರದರ್ಶನ: ಓಂಕಾರದಿAದ ಆರಂಭವಾದ ಯೋಗದಲ್ಲಿ ಕುತ್ತಿಗೆ, ಭುಜ, ಮೊಣಕಾಲು, ಚಲನೆಯ ಯೋಗಾಭ್ಯಾಸ, ಸೇತು ಬಂದಾಸನ, ಭುಜಂಗಾಸನ, ಕಪಾಲಭಾತಿ ಹಾಗೂ ಪ್ರಾಣಾಯಾಮ ಸೇರಿದಂತೆ ವಿವಿಧ ಆಸನಗಳ ಪ್ರದರ್ಶನದ ಬಗ್ಗೆ ಜ್ಯೋತಿ ಜಂಬಗಿ ಅವರು ಮಾರ್ಗದರ್ಶನ ನೀಡಿದರು. ಮಮತಾ ಸೊಲಬಗೌಡ್ರ ಹಾಗೂ ನವೀನ ಅವರು ಯೋಗ ಪ್ರದರ್ಶನ ನೀಡಿದರು.
ಸಾಮೂಹಿಕ ಯೋಗ: ಯೋಗ ಪ್ರದರ್ಶನದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ವರ ಬಡಿಗೇರ, ವಿವಿಧ ಇಲಾಖೆ ಅಧಿಕಾರಿಗಳು, ನಗರದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...