ಹಾವೇರಿ : ಅನಧಿಕೃತ ರೆಸಾರ್ಟ್ಸ್- ಹೋಂ ಸ್ಟೇಗಳಮೇಲೆ ಕಾನೂನು ಕ್ರಮ- ಡಿಸಿ ಡಾ. ದಾನಮ್ಮನವರ
ಹಾವೇರಿ : ಜಿಲ್ಲೆಯ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್ಸ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ರೆಸಾರ್ಟ್ಸ್ ಹಾಗೂ ಹೋಂ ಸ್ಟೇಗಳ ಮಾಲೀಕರಿಗೆ ಜಿಲ್ಲಾಧಿಕಾರಿ ಡಾವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿರುವ ಅನಧೀಕೃತ ರೆಸಾರ್ಟ್ಸ್ ಹಾಗೂ ಹೋಂ ಸ್ಟೇಗಳು ನೋಂದಣಿ ಮತ್ತು ಪರವಾನಿಗೆ(ಲೈಸನ್ಸ್) ಪಡೆಯದೇ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅಂತಹ ರೆಸಾರ್ಟ್ಸ್ ಹಾಗೂ ಹೋಂ ಸ್ಟೇಗಳ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.
ಪೊಲೀಸರಿಂದ, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ, ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದು?ರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ರೆಸಾರ್ಟ್ಸ್ ಹಾಗೂ ಹೋಂ ಸ್ಟೇ ಮಾಲೀಕರೇ ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.
ರಾಜ್ಯದಲ್ಲಿರುವ ರೆಸಾರ್ಟ್ಸ್ ಹಾಗೂ ಹೋಂ ಸ್ಟೆಗಳಿಗೆ ಆಗಮಿಸುವ ಪ್ರವಾಸಿಗರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ನೀಡುತ್ತಿರುವುದು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸೂಕ್ತ ಭದ್ರತೆ ಮತ್ತು ಸುರಕ್ಷತೆ ನೀಡುವುದು ನಿಮ್ಮ ಆದ್ಯ ಕರ್ತವ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಯಾವುದಾದರೂ ಅಹಿತಕರ ಘಟನೆಗಳು ಸಂಭವಿಹಿಸದಂತೆ ಎಚ್ಚರಿಕೆ ವಹಿಸಲು ಹಾಗೂ ಸ್ಥಳ ವೀಕ್ಷಣಾ/ಕಾರ್ಯಕ್ರಮಗಳ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ, ‘ಎ’ ಬ್ಲಾಕ್ ಎರಡನೇ ಮಹಡಿ ಜಿಲ್ಲಾಡಳಿತ ಭವನ ದೇವಗಿರಿ, ದೂರವಾಣಿ ಸಂಖ್ಯೆ ೦೮೩೭೫-೨೯೬೦೩೩ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Date: