ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಜನತೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುತ್ತಾರೆ: ಬಸವರಾಜ ಬೊಮ್ಮಾಯಿ ವಿಶ್ವಾಸ

Date:

*ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಜನರು ನನಗೆ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇರುವಂತೆ ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ ಹೆಚ್ಚು ಮತದಿಂದ ಗೆಲ್ಲಿಸಿ ಕಳಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಕ್ಷೇತ್ರದ ಅಭಿವೃದ್ಧಿ ಯನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದರು.
ಮಾಜಿ ಡಿಸಿಎಂ ಈಶ್ವರಪ್ಪ ಕುರಿತು ಕೇಳಿದ ಪ್ರಶ್ಬೆಗೆ ಉತ್ತರಿಸಿದ ಅವರು, ಅವರು ಸುಮಾರು ಆರು ತಿಂಗಳಿಂದ ಆಕ್ಷೇತ್ರದಲ್ಲಿ ಓಡಾಡಿದ್ದಾರೆ‌. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದ್ದೆ. ಪಕ್ಷದ ರಾಷ್ಟ್ರೀಯ ನಾಯಕರು ಗೆಲುವಿನ ಲೆಕ್ಕಾಚಾರ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. ಈಶ್ವರಪ್ಪ ಅವರು ಹಿರಿಯರಿದ್ದಾರೆ. ಪಕ್ಷ ಅವರಿಗೆ ಸೂಕ್ತ ಗೌರವ ನೀಡುತ್ತದೆ ಎನ್ನುವ ವಿಶ್ವಾಸ ಇದೆ. ಕುರುಬ ಸಮುದಾಯದೊಂದಿಗೆ ನನಗೆ ಉತ್ತಮ ಸಂಬಂಧ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಅನುಭವದ ಜೊತೆಗೆ ಹೊಸ ಯುವಕರಿಗೆ ಅವಕಾಶ ಕೊಡಬೇಕೆಂಬ ಕಾರಣದಿಂದ ಹೊಸ ಮುಖಗಳಿಗೆ ನೀಡಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬೆಂಗಳೂರು ಉತ್ತರದಲ್ಲಿ ಸದಾನಂದಗೌಡರು ಸ್ಪರ್ದಿಸಬೇಕೆಂಬುದು ಅಲ್ಲಿನ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಇತ್ತು. ಅವರೂ ಮತ್ತು ಈಶ್ವರಪ್ಪ ಅವರ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ಒಳ್ಳೆಯ ಅವಕಾಶ ನೀಡುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ನಾಯಕರು ಪಕ್ಷದಲ್ಲಿ ಯಾವುದೇ ಒಳ ಹೊಡೆತ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...