ಹಾವೇರಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡ ಅಮಾನತ್ತು

Date:

ಹಾವೇರಿ: ಇಲ್ಲಿನ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭರತ ಹೆಗಡೆ ಅವರನ್ನು ಅಮಾನತ್ತುಗೊಳಿಸಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಸರ್ಕಾರದ ಅಧಿನ ಕಾರ್ಯದರ್ಶಿ ಬಾಲಪ್ಪ ಆ.೩ರಂದು ಆದೇಶ ಹೊರಡಿಸಿದ್ದಾರೆ.
ಹಾವೇರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮರ ಹಿತದೃಷ್ಟಿಯಿಂದ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ದಾಂಡೇಲಿ, ಉತ್ತರ ಕನ್ನಡ ಜಿಲ್ಲೆ ಇಲ್ಲಿಗೆ ವರ್ಗಾಯಿಸಲಾಗಿರುತ್ತದೆ. ಅದರನ್ವಯ ಇವರನ್ನು ದಿನಾಂಕ: ೩೦.೦೭.೨೦೨೪ರ ಅಧಿಕೃತ ಜ್ಞಾಪನದಲ್ಲಿ ಹಾವೇರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಸದರಿ ಹುದ್ದೆಗೆ ನವೀನ್ ಪ್ರಸಾದ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಸವಣೂರು ಇವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಲಾಗಿರುತ್ತದೆ.
ಆದರೆ, ಭರತ್ ಹೆಗಡೆ ತಮ್ಮ ವರ್ಗಾವಣಾ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ತಡೆಯಾಜ್ಞೆ ತಂದು ಸದರಿ ಮಾಹಿತಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಅನುಮತಿ ಪಡೆಯದೇ ದಿನಾಂಕ: ೦೧.೦೮.೨೦೨೪ ರಂದು ಹಾವೇರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ, ಹುದ್ದೆಯ ಕರ್ತವ್ಯಕ್ಕೆ ಮರು ಹಾಜರಾಗಿದ್ದರು.
ಹಾವೇರಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿದು ಪ್ರಕೃತಿ ವಿಕೋಪ ಉಂಟಾಗಿ ಸುಮಾರು ಮನೆಗಳು ಹಾಳಾಗಿದ್ದು ಹಾಗೂ ರೈತರ ಬೆಳೆಗಳು ಹಾಳಾಗಿರುತ್ತವೆ. ಈ ಸಮಯದಲ್ಲಿ ತಾ.ಪಂ ಇಓ ಭರತ್ ಹೆಗಡೆ ಕೇಂದ್ರ ಸ್ಥಾನದಲ್ಲಿಇಲ್ಲದೇ ಇದ್ದುದರಿಂದ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದ್ದರು. ದಿನಾಂಕ: ೦೭.-೧೧-.೨೦೨೩ ರಂದು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ತ್ರೈಮಾಸಿಕ ಕೆ.ಡಿ.ಪಿ. ಸಭೆಗೆ ಪೂರ್ವಾನುಮತಿ ಪಡೆಯದೇ ಗೈರು ಹಾಜರಾಗಿದ್ದು ಇವರ ಕಾರ್ಯವೈಖರಿ ಕುರಿತು. ವಿಷಾದ ವ್ಯಕ್ತಪಡಿಸಿದ್ಧರಿಂದ ಹೆಗಡೆ ಅವರಿಗೆ ಕಾರಣ ಕೇಳುವ ನೋಟೀಸ್ ಜಾರಿ ಮಾಡಿದ್ದರೂ ಸಹ ಇವರು ಸಮಂಜಸ ಉತ್ತರ ನೀಡಿರುವುದಿಲ್ಲ. ಇವರ ಈ ಬೇಜವಾಬ್ದಾರಿ ವರ್ತನೆ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ದುರ್ನಡತೆ ಎಸಗಿರುವುದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಹಾವೇರಿ ಇವರು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು.
ಈ ಪ್ರಸ್ತಾವನೆಯನ್ನು ಸರ್ಕಾರದಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸರ್ಕಾರದ ದಿನಾಂಕ: ೨೯.೦೭.೨೦೨೪೦ ವರ್ಗಾವಣಾ ಆದೇಶದನ್ವಯ ಮುಖ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಇವರನ್ನು ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ, ಹಾವೇರಿ ಹುದ್ದೆಯಿಂದ ಬಿಡುಗಡೆಗೊಳಿಸಿದ ನಂತರ ವರ್ಗಾವಣಾ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಯಿಂದ ತಡೆಯಾಜ್ಞೆ ತಂದು ಸದರಿ ಮಾಹಿತಿಯನ್ನು ಸರ್ಕಾರಕ್ಕಾಗಲೀ ಅಥವಾ ಜಿಲ್ಲಾ ಪಂಚಾಯಿತಿಯ ಗಮನಕ್ಕೆ ತಾರದ ಹಾಗೂ ಅನುಮತಿ ಪಡೆಯದೇ ಸದರಿ ಹುದ್ದೆಯಗೆ ಸ್ವಯಂ ವರದಿ ಮಾಡಿಕೊಂಡಿದ್ದರು.
ಕೇಂದ್ರ ಸ್ಥಾನದಲ್ಲಿ ಹಾಜರಿದ್ದು ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಭಾದಿತರಾದ ಸಂತ್ರಸ್ಥರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಒದಗಿಸಲು ವಿಫಲರಾಗಿರುವುದರಿಂದ ಹಾಗೂ ಜಿಲ್ಲಾ ಪಂಚಾಯಿತಿಯ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಹಾಜರಾಗದೇ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿ, ಸರ್ಕಾರ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸದರಿಯವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲು ಸರ್ಕಾರವು ತೀರ್ಮಾನಿಸಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...