ಹಾವೇರಿ: ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾ.ಪಂ.ಅಧಿಕಾರ ಅನುಭವಿಸಿದ ಮಹಿಳೆಗೆ ಏಳು ವರ್ಷ ಜೈಲು ಶಿಕ್ಷೆ

Date:

Court Press Note 18-8-23

ಹಾವೇರಿ : ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯಲು ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿದ ಶಿಗ್ಗಾಂವ ತಾಲೂಕು ವನಹಳ್ಳಿ ಗ್ರಾಮದ ಆರೋಪಿ ಶ್ರೀಮತಿ ಲಕ್ಷ್ಮೀ ಕೋಂ.ಮಾರುತಿ ಕಬ್ಬೇರ ಇವಳಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ರೂ.೧೯ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀ ನಾರಾಯಣ ಗುರುವಾರ ಅವರು ತೀರ್ಪು ನೀಡಿದ್ದಾರೆ.
ಶಿಗ್ಗಾಂವ ತಾಲೂಕು ವನಹಳ್ಳಿ ಗ್ರಾಮದ ಆರೋಪಿ ಶ್ರೀಮತಿ ಲಕ್ಷ್ಮೀ ಕೋಂ.ಮಾರುತಿ ಕಬ್ಬೇರ ಇವಳು ಹಿಂದೂ ಗಂಗಾಮತ(ಪ ವರ್ಗ-೦೧)ಕ್ಕೆ ಸೇರಿದ್ದರೂ ಸಹ, ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಅಫಿಡವಿ ಘೋಷಣಾ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿಸಿ ೦೪ ಜೂನ್ ೨೦೧೫ ರಂದು ಶಿಗ್ಗಾಂವ ತಹಶೀಲ್ದಾರ ಕಚೇರಿ ಸಲ್ಲಿಸಿ, ಹಿಂದೂ ಗಂಟಿಚೋರ್ಸ್ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಹನುಮರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿ, ನಂತರ ಎಸ್.ಸಿ. ಸ್ಥಾನಕ್ಕೆ ಮೀಸಲಾಗಿದ್ದ ಗ್ರಾ.ಪಂ.ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಳು.
ಸುಳ್ಳು ಜಾತಿಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಮೋಸಮಾಡಿದ ಕುರಿತಂತೆ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್ಸಪೆಕ್ಟರ್ ಟಿ.ಜಿ.ಶ್ರೀಧರ ಶಾಸ್ತ್ರೀ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಮೇಲೆ ಕಲಂ:೧೯೮,೪೨೦, ೪೬೫, ೪೬೮, ೪೭೧ ಭಾ.ದಂ.ಸಂ. ಮತ್ತು ೩(೧)ಕ್ಯೂ ಎಸ್‌ಸಿ/ಎಸ್‌ಟಿ (ಪಿಎ) ತಿದ್ದುಪಡಿ ಕಾಯ್ದೆ ೨೦೧೫ರ ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಜಿ.ಕೂಲಗಿಮಠ ಅವರು ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...