ಹೊಸರಿತ್ತಿ ರಾಷ್ಟ್ರೀಯ ಶಿಕ್ಷಣ ಸಮಿತಿ ಆಸ್ತಿ ಅಕ್ರಮ! : ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರ ಗಂಭೀರ ಆರೋಪ

Date:

ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿ ಆಡಳಿತ ಮಂಡಳಿಯ ಕೆಲ ಪದಾಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರಸ್ತುತ ಆಡಳಿತ ಮಂಡಳಿಯನ್ನು ವಜಾ ಮಾಡಿ, ಆಸ್ತಿಯನ್ನು ಮತ್ತೆ ಸಂಸ್ಥೆಯ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾಕಮ್ಮನವರಿಗೆ ಮನವಿ ಸಲ್ಲಿಸಿದ್ದಾರೆ.
೧೯೬೫ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣ ಚಳುವಳಿಯ ನಾಯಕರಾದ ಗುದ್ಲೇಪ್ಪ ಹಳ್ಳಿಕೇರಿ ಅವರಿಂದ ಸ್ಥಾಪಿತವಾದ ಈ ಶಿಕ್ಷಣ ಸಂಸ್ಥೆ, ದಾನಿಗಳ ಸಹಕಾರದಿಂದ ಬೆಳೆದು, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿತ್ತು. ಆದರೆ ಇತ್ತೀಚೆಗೆ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅವ್ಯವಹಾರಗಳು ಹೆಚ್ಚಾಗಿದ್ದು, ಸ್ವಜನ ಪಕ್ಷಪಾತದ ಆರೋಪಗಳು ಕೇಳಿಬರುತ್ತಿವೆ.
ಸಂಸ್ಥೆಗೆ ಸೇರಿದ ಹೊಸರಿತ್ತಿ ಗ್ರಾಮದ ಸರ್ವೆ ನಂ. ೭೧/ಬಿ ಆಸ್ತಿಯನ್ನು ಪದವಿ ಕಾಲೇಜು ಕಟ್ಟಡ ನಿರ್ಮಾಣದ ನೆಪದಲ್ಲಿ ಕಡಿಮೆ ಬೆಲೆಗೆ ಆಡಳಿತ ಮಂಡಳಿಯ ಕೆಲ ಸದಸ್ಯರು ಹಾಗೂ ಅವರ ಬಂಧುಗಳ ಹೆಸರಿಗೆ ಖರೀದಿಸಿಕೊಂಡಿದ್ದಾರೆ ಎಂದು ಮನವಿ ಪತ್ರದಲ್ಲಿ  ದೂರಲಾಗಿದೆ.
ಪ್ರತಿ ೫೫.೭೦ ಚದರ ಮೀಟರ್ ಜಾಗಕ್ಕೆ  ಮಾರುಕಟ್ಟೆಯಲ್ಲಿ ಕನಿಷ್ಠ ೩೦ ಲಕ್ಷ ರೂ. ಬೆಲೆ ಇದ್ದರೂ, ಕೇವಲ ೨ ಲಕ್ಷಕ್ಕೆ ನೋಂದಣಿ ಮಾಡಲಾಗಿದೆ. ಇದರಿಂದ ಪ್ರತಿಪ್ಲಾಟ್‌ಗೆ ಸುಮಾರು ೨೮ ಲಕ್ಷ  ರೂ. ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕ್ರಮವು ಕರ್ನಾಟಕ ಶಿಕ್ಷಣ ಕಾಯ್ದೆ ೧೯೮೩ರ ಸೆಕ್ಷನ್ ೬೦ ಮತ್ತು ೬೧ರ ಉಲ್ಲಂಘನೆಯಾಗಿದ್ದು, ಸರಕಾರದ ಅನುದಾನ ಪಡೆಯುವ ಸಂಸ್ಥೆಯ ಆಸ್ತಿಯನ್ನು ಮಾರಾಟ ಮಾಡುವಾಗ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ. ಅಲ್ಲದೇ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ (ಕೆಪಿಟಿಟಿ) ೧೯೯೯ರ ನಿಯಮಗಳನ್ನು ಉಲ್ಲಂಘಿಸಿ ಬಹಿರಂಗ ಹರಾಜು ನಡೆಸದೇ ಆಸ್ತಿಯನ್ನು ಮಾರಾಟ ಮಾಡಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಆಡಳಿತ ಮಂಡಳಿಯ ಕೆಲ ಸದಸ್ಯರಾದ ಸಿದ್ಧಲಿಂಗಪ್ಪ ಹಳ್ಳಿಕೇರಿ ಹಾಗೂ ವೀರಣ್ಣ ಅರಳಿ ಸಭೆಯಲ್ಲಿ ಈ ಅಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೂ, ಅವರ ಮಾತುಗಳನ್ನು ಇತರರು ಪರಿಗಣಿಸಿಲ್ಲ, ಇದಲ್ಲದೆ, ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ಆಸ್ತಿ ವಿವರಗಳ ಮಾಹಿತಿಯನ್ನು ಸಂಸ್ಥೆಯ ಕಾರ್ಯದರ್ಶಿ ನೀಡಲು ನಿರಾಕರಿಸಿರುವುದರಿಂದ ಅನುಮಾನಗಳು ಇನ್ನಷ್ಟು ಗಾಢವಾಗಿವೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಆಡಳಿತ ಮಂಡಳಿಯನ್ನು ವಜಾ ಮಾಡಬೇಕು, ಸರಕಾರದಿಂದ  ಆಡಳಿತಾಧಿಕಾರಿ ನೇಮಕ ಮಾಡಬೇಕು, ಅಕ್ರಮವಾಗಿ ಖರೀದಿಸಿದ ಆಸ್ತಿಗಳ ನೋಂದಣಿ ರದ್ದುಪಡಿಸಿ ಸಂಸ್ಥೆಯ ವಶಕ್ಕೆ ಪಡೆಯಬೇಕು ಹಾಗೂ  ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸಂಸ್ಥೆಯ ಹಿತಾಸಕ್ತಿಗಾಗಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ , ಪರಿಶೀಲಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಸವರಾಜ ಮರಳಿಹಳ್ಳಿ, ಐ.ಜಿ.ಕೋರಿ, ಸಿ.ಕೆ.ಹಳ್ಳಿಕೇರಿ, ಎಂ.ಬಿ.ಮುಂಡರಗಿ, ನಿರಂಜನ ಪರಂಗಿ, ಸಿದ್ದಲಿಂಗಪ್ಪ ಕಲಕೋಟಿ, ಮುತ್ತಯ್ಯ ಕಿತ್ತೂರಮಠ, ಶ ಕೆ.ಸಿ.ಕೋರಿ, ಮಲ್ಲಣ್ಣ ಹಳ್ಳಿಕೇರಿ, ಸಿದ್ದಣ್ಣ ಹಳ್ಳಿಕೇರಿ, ರುದ್ರಪ್ಪ ಯತ್ನಳ್ಳಿ, ರವಿ ಚಂದ್ರಗಿರಿ, ಸಿದ್ದಲಿಂಗಪ್ಪ ರಾಚನಾಯ್ಕರ್,  ಗುದ್ಲೆಪ್ಪ ಸವಣೂರ, ಆನಂದ ಮುರಡೆಪ್ಪನವರ, ಶಂಭಣ್ಣ  ಶಾಬಳದ, ಬಿ.ಎಸ್.ದೊಡ್ಡಮನಿ, ಎಸ್.ಜಿ.ದೀಪಾಳಿ, ರವಿ ಗಾಣಗೇರ ಸೇರಿದಂತೆ ಹೊಸರಿತ್ತಿ ಗ್ರಾಮಸ್ಥರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಅಪರಿಚಿತ ವಾಹನ ಡಿಕ್ಕಿ- ಚಿರತೆ ಸಾವು

ಅಪರಿಚಿತ ವಾಹನ ಡಿಕ್ಕಿ- ಚಿರತೆ ಸಾವು ಹಾವೇರಿ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ...

ಬ್ಯಾಂಕ್‌ಗಳು  ಯಾವುದೇ ಕಾರಣಕ್ಕೂ ಎಜುಕೇಶನ್ ಲೋನ್ ನೀಡುವುದನ್ನು ನಿರಾಕರಿಸುವಂತಿಲ್ಲ :  ನಿಸಾರ್ ಅಹಮ್ಮದ್

--  ಬ್ಯಾಂಕ್‌ಗಳು  ಯಾವುದೇ ಕಾರಣಕ್ಕೂ ಎಜುಕೇಶನ್ ಲೋನ್ ನೀಡುವುದನ್ನು ನಿರಾಕರಿಸುವಂತಿಲ್ಲ :...

“ನವಿಲಿ”ಗೂ “ಅಂತ್ಯ ಸಂಸ್ಕಾರ”  ಮಾನವೀಯತೆ ಮೆರೆದ “ಪವರ ಮ್ಯಾನ”ಗಳು

"ನವಿಲಿ"ಗೂ "ಅಂತ್ಯ ಸಂಸ್ಕಾರ"  ಮಾನವೀಯತೆ ಮೆರೆದ "ಪವರ ಮ್ಯಾನ"ಗಳು  ರಾಣೆಬೆನ್ನೂರ- ಭಾರತೀಯ ಸಂಸ್ಕೃತಿಯ...

“ಹಾವೇರಿಜಿಲ್ಲೆಯ ಕುಡಿವ ನೀರಿನ ಸಮಸ್ಯೆಗೆ ಗುತ್ತಿಗೆದಾರರೇ ಕಾರಣ” ಮುಖ್ಯಮಂತ್ರಿಗಳ ಗಮನ ಸೆಳೆದ ಸಚಿವ ಶಿವಾನಂದ ಪಾಟೀಲ

  "ಹಾವೇರಿಜಿಲ್ಲೆಯ ಕುಡಿವ ನೀರಿನ ಸಮಸ್ಯೆಗೆ ಗುತ್ತಿಗೆದಾರರೇ ಕಾರಣ" ಮುಖ್ಯಮಂತ್ರಿಗಳ ಗಮನ ಸೆಳೆದ...