ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶೇ.80.48ರಷ್ಟು ಮತದಾನ: ಡಾ.ವಿಜಯಮಹಾಂತೇಶ ದಾನಮ್ಮನವರ

Date:

ಹಾವೇರಿ : ಶಿಗ್ಗಾಂವ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ನಡೆದ ಉಪ ಚುನಾವಣೆಯಲ್ಲಿ ಶೇ.80.48ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆ ಸಂಜೆವರೆಗೆ ಸುವ್ಯವಸ್ಥಿತವಾಗಿ ನಡೆಯಿತು. ಯಾವುದೇ ಅಹಿತಕರ ಘಟನೆಗಳು ದಾಖಲಾಗಿರುವುದಿಲ್ಲ. ಎಲ್ಲಾ 241 ಮತಗಟ್ಟೆಗಳಲ್ಲಿ ಅಗತ್ಯ ಭದ್ರತೆ ಒದಗಿಸಲಾಗಿತ್ತು. ಕುಡಿಯುವ ನೀರು, ವೈದ್ಯಕೀಯ ಚಿಕಿತ್ಸೆಗೆ ಏರ್ಪಾಡು ಮಾಡಲಾಗಿತ್ತು.
ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ.10.08ರಷ್ಟು, 11 ಗಂಟೆವರೆಗೆ ಶೇ.26.01ರಷ್ಟು, ಮಧ್ಯಾಹ್ನ 1 ಗಂಟೆವರೆಗೆ ಶೇ.43.50ರಷ್ಟು, ಮಧ್ಯಾಹ್ನ 3 ಗಂಟೆವರೆಗೆ ಶೇ.59.62ರಷ್ಟು, ಸಂಜೆ 5 ಗಂಟೆವರೆಗೆ 75.07ರಷ್ಟು ಹಾಗೂ ಮತದಾನ ಅವಧಿ ಮುಕ್ತಾಯನಂತರ ಅಂತಿಮವಾಗಿ ಶೇ.80.48ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.
*ಮತದಾನದ ವಿವರ*: ಒಟ್ಟು 1,21,443 ಪುರುಷರು, 1,16,076 ಮಹಿಳೆಯರು ಹಾಗೂ ಇತರೆ 6 ಸೇರಿ ಒಟ್ಟು 2,37,525 ಮತದಾರರ ಪೈಕಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ 13,074 ಪುರುಷರು ಹಾಗೂ 10,877 ಮಹಿಳೆಯರಿಂದ ಶೇ.10.08ರಷ್ಟು ಮತದಾನವಾಗಿದೆ. ಬೆಳಗಿನ 11 ಗಂಟೆವರೆಗೆ 32,315 ಪುರುಷರು ಹಾಗೂ 29,461 ಮಹಿಳೆಯರಿಂದ ಶೇ.26.01ರಷ್ಟು ಮತದಾನವಾಗಿದೆ. ಮಧ್ಯಾಹ್ನ 1 ಗಂಟೆವರೆಗೆ 51,483 ಪುರುಷರು ಹಾಗೂ 51,838 ಮಹಿಳೆಯರಿಂದ ಶೇ.43.50ರಷ್ಟು ಮತದಾನವಾಗಿದೆ. ಮಧ್ಯಾಹ್ನ 3 ಗಂಟೆವರೆಗೆ 69,750 ಪುರುಷರು ಹಾಗೂ 71,856 ಮಹಿಳೆಯರು ಇತರೆ ಓರ್ವ ಸೇರಿ 1,41,607 ಜನರಿಂದ ಶೇ.59.62ರಷ್ಟು ಮತದಾನವಾಗಿದೆ. ಸಂಜೆ 5 ಗಂಟೆವರೆಗೆ 89,737 ಪುರುಷರು ಹಾಗೂ 88,582 ಮಹಿಳೆಯರು ಮತ್ತು ಇತರೆ ಇಬ್ಬರು ಸೇರಿ 1,78,321 ಜನರಿಂದ ಶೇ.75.07ರಷ್ಟು ಮತದಾನವಾಗಿದೆ. ಅಂತಿಮವಾಗಿ ಮತದಾನ ಅವಧಿ ಮುಕ್ತಾಯದ ಬಳಿಕ 98,642 ಪುರುಷರು ಹಾಗೂ 92,522 ಮಹಿಳೆಯರು ಮತ್ತು ಇತರೆ 2 ಸೇರಿ ಒಟ್ಟು 1,91,166 ಜನರು ಮತಹಕ್ಕನ್ನು ಚಲಾಯಿಸಿ ಶೇ.80.48ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
*ಅಗತ್ಯ ಭದ್ರತೆ:* ಮತದಾನದ ಬಳಿಕ ಮತಯಂತ್ರಗಳ ಸಾಗಣೆಯನ್ನು ಸೂಕ್ತ ಪೊಲೀಸ್ ಬಂದೋಬಸ್ತ್ ಯೋಜನೆ ರೂಪಿಸಿ ಕೈಗೊಳ್ಳಲಾಗಿದೆ. ಮತ ಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಭದ್ರತೆಯಿಂದ ಮತಯಂತ್ರಗಳನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
*ನವೆಂಬರ್ 23ಕ್ಕೆ ಮತ ಎಣಿಕೆ:* ಈ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನವೆಂಬರ್ 23ರಂದು ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ ರೆಡ್ಡಿ ವಂಟಗೋಡಿ ಅಧಿಕಾರ ಸ್ವೀಕಾರ

ಹಾವೇರಿ ಜಿಲ್ಲೆಯ ನೂತನ ಹಾಗೂ ಪ್ರಥಮ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯಶೋದಾ...