ಮಕ್ಕಳೊಂದಿಗೆ ಸ್ವಾತಂತ್ರ್ಯ ಸಂಭ್ರಮಹಂಚಿಕೊಂಡ ಸಚಿವ ಶಿವಾನಂದ ಪಾಟೀಲ

Date:

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜರುಗಿದ ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೭ ಸಾಧಕರನ್ನು ಸನ್ಮಾನಿಸಲಾಯಿತು.
ರಕ್ಷಣಾ ಸೇವೆಯ ಕ್ಯಾಪ್ಟನ್ ಡಾ.ಲಕ್ಷ್ಮೀ ಆರ್., ಕ್ರೀಡಾ ಕ್ಷೇತ್ರದಿಂದ ಕಿರಣ ಮಲ್ಲಮ್ಮನವರ, ಧನ್ಯಾ ಮ.ಕಳ್ಳಿ, ತನುಶ್ರೀ ವರ್ದಿ, ಅರುಂದ ಕರೆಮ್ಮನವರ, ಜಯಂತಿ ನೆಲ್ಲಿಕೊಪ್ಪ, ಪವಿತ್ರಾ ಅರಳಿಕಟ್ಟಿ, ಭೂಮಿಕಾ ಕಛವಿ, ಲಕ್ಷ್ಮೀ ಶಿಂಗ್ರಿ, ಸಂಗೀತಾ ಅರಳಿಕಟ್ಟಿ, ಮಮತಾ ಲಿಂಗದಹಳ್ಳಿ, ಪೂಜಾರ ಕೊಂಡದ, ಮಂಜುಳಾ ಲಮಾಣಿ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ಆಡೂರ ಪೊಲೀಸ್ ಠಾಣೆ ಪೊಲೀಸ್ ಕಾನ್ಸಟೇಬಲ್ ಕರಬಸಪ್ಪ ಮನೋಹರ ಗೊಂದಿ, ವೈದ್ಯಕೀಯ ಕ್ಷೇತ್ರದಿಂದ ಜಿಲ್ಲಾ ಆಸ್ಪತ್ರೆ ಡಾ.ಪರಮೇಶ್ವರ ಹಾವನೂರ, ಡಾ.ಪ್ರಭಾಕರ ಕುಂದೂರ, ರಾಣೇಬೆನ್ನೂರ ಸಾಯಿ ಆಸ್ಪತ್ರೆ ಡಾ.ಸುಷ್ಮಾ ಸಾಹುಕಾರ ಅವರನ್ನು ಸನ್ಮಾನಿಸಲಾಯಿತು.
ಆಕರ್ಷಕ ಪಥಸಂಚಲನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಶಸ್ತ್ರಮೀಸಲು ಪಡೆ, ನಾಗರಿಕ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕದಳ, ಎನ್.ಸಿ.ಸಿ., ಸ್ಕೌಟ್ ಆಂಡ್ ಗೌಡ್ಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳ ಶಿಸ್ತುಬದ್ಧ ಪಥಸಂಚಲನ ಎಲ್ಲರ ಗಮನ ಸೆಳೆಯಿತು. ಇದಕ್ಕೂ ಮುನ್ನ ಸಚಿವರು ಅಲಂಕೃತ ವಾಹನದಲ್ಲಿ ಪಥಸಂಚಲನ ನಡೆಸಿದರು.
ನೃತ್ಯಗಳು: ಶಾಲಾ ವಿದ್ಯಾರ್ಥಿಗಳಿಂದ ಜರುಗಿದ ವಿವಿಧ ದೇಶಭಕ್ತಿಗಳ ನೃತ್ಯಪ್ರದರ್ಶನಗಳು ಎಲ್ಲರ ಗಮನ ಸೆಳೆದವು.
ಬಹುಮಾನ ವಿತರಣೆ: ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೊನೆಯತನಕ ಕುಳಿತು ವಿಕ್ಷೀಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು , ಪ್ರತಿ ನೃತ್ಯ ಕಾರ್ಯಕ್ರಮದ ನಂತರ ಬಹುಮಾನ ವಿತರಿಸಿ ಮಕ್ಕಳನ್ನು ಬೆನ್ನುತಟ್ಟಿ ಪ್ರೋತ್ಸಾಹಿಸಿದರು.
ಇದೇ ಸಂದರ್ಭದಲ್ಲಿ ಪಥಸಂಚಲನದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಿದರು.
ಅಚ್ಚುಕಟ್ಟು ವ್ಯವಸ್ಥೆ: ೭೭ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಅಚ್ಚುಕಟ್ಟಾಗಿ ಆಯೋಜಿಸಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.
ಮಾಲಾರ್ಪಣೆ: ಸಮಾರಂಭಕ್ಕೂ ಮುನ್ನ ನಗರದ ಆಯಾ ವೃತ್ತಗಳಿಗೆ ತೆರಳಿ, ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ, ಮೈಲಾರ ಮಹದೇವಪ್ಪ ಪುತ್ಥಳಿಗೆ, ಮಹಾತ್ಮಗಾಂಧೀಜಿ ಪುತ್ಥಳಿಗೆ ಸಚಿವರು ಮಾಲಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಮೈಲಾರ ಮಹದೇವಪ್ಪ ವೃತ್ತದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.
ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಗುಣಾರೆ, ಜಿ.ಪಂ.ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...