ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ವಿರೋಧಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲು ಮಾಳಗಿ ಒತ್ತಾಯ

Date:

ಹಾವೇರಿ: ಬಸವರಾಜ ಬೊಮ್ಮಾಯಿ ಅವರು ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ, ನಾಲ್ಕು ಬಾರಿ ವಿಧಾನಸಭಾ ಸದಸ್ಯರಾಗಿ, ಮಾಜಿ ಮುಖ್ಯಮಂತ್ರಿಗಳಾದ ಜೆ.ಎಚ್. ಪಟೇಲ ಅವರ ಸಂಸದೀಯ ಕಾರ್ಯದರ್ಶಿಯಾಗಿ, ಬಿ.ಎಸ್ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಹಾಗೂ ಗೃಹ ಸಚಿವರಾಗಿ ಮತ್ತು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯಾಗಿ ರಾಜ್ಯದ ಸೇವೆಯನ್ನು ದಕ್ಷ ಮಾಡಿದ್ದಾರೆ. ಇವರನ್ನು ರಾಜ್ಯ ವಿಧಾನಸಭೆಯ ವಿರೋಧಪಕ್ಷದ ನಾಯಕರನ್ನಾಗಿ ಆಯ್ಕೆಮಾಡುವಂತೆ ಲಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ.
ಈಬಗ್ಗೆ ಶನಿವಾರ ಪತ್ರಿಕಾಪ್ರಕಟಣೆ ನೀಡಿರುವ ಅವರು ಬಸವರಾಜ ಬೊಮ್ಮಾಯಿ ಅವರು ಜಿ.ಇ ಮೆಕ್ಯಾನಿಕಲ್ ಇಂಜನಿಯರ್ ಪದವಿಧರರು ಇದ್ದು, ಬಹುಭಾಷೆ ಪಾಂಡಿತ್ಯ ಹೊಂದಿರುತ್ತಾರೆ. ಬಿ.ಎಸ್ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಹಾಗೂ ಗೃಹ ಸಚಿವರಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದ ಸೇವೆಯನ್ನು ಮಾಡಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕ ಮತ್ತು ನೀರಾವರಿ ತಜ್ಞರಾಗಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ.
ಶತಮಾನಗಳಿಂದ ಮೀಸಲಾತಿಗೆ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದ್ದರೂ ಸಹ ಕಳೆದ ೩೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಚಿವ ಸಂಮಟದಲ್ಲಿ ನಿರ್ಣಯಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುತ್ತಾರೆ. ಪರಿಶಿಷ್ಟ ಪಂಗಡಕ್ಕೆ ಶೇ೩ ರನ್ನು ಶೇ.೭ ನಿಗದಿಪಡಿಸಿದ ನೇತಾರರು ಇದ್ದು, ಒಟ್ಟಾರೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯ ಬಗ್ಗೆ ಅಪಾರ ಜ್ಞಾನ ಹೊಂದಿದ ನಾಯಕರು ಇದ್ದು ಇವರನ್ನು ಭಾರತಿಯ ಜನತಾ ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ತಡ ಮಾಡದೇ ವಿರೋಧ ಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಬೇಕು.
ಬೊಮ್ಮಾಯಿ ಅವರನ್ನು ವಿರೋಧಪಕ್ಷದನಾಯರನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಇವರ ಅಭಿಮಾನಿ ಬಳಗವು, ರಾಜ್ಯದಲ್ಲಿ ಲಕ್ಷೆಪಲಕ್ಷ ಕಾರ್ಯಕರ್ತರು ಬೇಸರಗೊಂಡು ಮುನಿಸಿಕೊಳ್ಳುತ್ತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಹುದು, ಬಸವರಾಜ ಬೊಮ್ಮಾಯಿ ಅವರು ಅವರ ತಂದೆ ದಿ.ಎಸ್.ಆರ್. ಬೊಮ್ಮಾಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಚಿವರಾಗಿ ರಾಜ್ಯ ಹಾಗೂ ರಾಷ್ಟ್ರದಲ್ಲಿ, ದಕ್ಷ, ಆಡಳತವನ್ನು ನಡೆಸಿದ ಎಸ್.ಆರ್. ಬೊಮ್ಮಾಯಿರವರ ಮತ್ತು ಬಸವರಾಜ ಬೊಮ್ಮಾಯಿರವರು ಯಾವುದೇ ಸಮುದಾಯಕ್ಕೆ ಅನ್ಯಾಯವಾಗದ ರೀತಿಯಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ.
ಬಸವರಾಜ್ ಬೊಮ್ಮಾಯಿ ಇವರೊಬ್ಬ ಪಾಕ್ಯಾತೀತ ನಾಯಕರು ಇದ್ದು, ಇಂತವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವಲ್ಲಿ ಬಿಳಂಬ ಮಾಡುತ್ತಿರುವದನ್ನು ನೋಡಿದರೆ ಇವರ ಅಭಿಮಾನಿ ಬಳಗಕ್ಕೆ, ಕಾರ್ಯಕರ್ತರಿಗೆ ನೋವಾಗಿದೆ. ಈ ನೋವನ್ನು ಈಗಲೇ ಶಮನಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ. ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ನಿರ್ಣಯ ಮಾಡಬೇಕೆಂದು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ, ಆಧಿಜಾಂಭವ ಸಮಾಜದ ನಾಯಕರಾದ ಡಿ.ಎಸ್.ಮಾಳಗಿ, ಮಂಜುನಾಥ, ಮಡಿವಾಳರ, ಮಾದೇವಪ್ಪ ವಗ್ಗರ, ಶಿವಬಸವ ಶೌಶೆಟ್ಟಿ, ಸುಭಾಸ ಹಿರೇತನದ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...