ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮನವಿ

Date:

ಹಾವೇರಿ : ಗೌರಿ-ಗಣೇಶ ಹಬ್ಬದವನ್ನು ಬಣ್ಣರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಗಳೊಂದಿಗೆ ಆಚರಿಸಿ, ತದನಂತರ ಗೌರಿ-ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ್ ಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ.ಪಿ.ಸಿ ಸೆಕ್ಷನ್ ೧೮೬೦ ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು. ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಲು ತಿಳಿಸಿದ್ದಾರೆ.
ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳ ಅನುಸಾರ ಧ್ವನಿವರ್ಧಕ ಬಳಕೆ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳ ಬಳಕೆಗೆ ಕರ್ನಾಟಕ ಪೊಲೀಸ್ ಕಾಯ್ದೆ, ೧೯೬೩ ರನ್ವಯ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಂಧಿಸಿದ ಮಾರ್ಗಸೂಚಿಗಳನ್ವಯ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು.
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್ (ಥರ್ಮೊಕೋಲ್)ಗಳನ್ನು ಬಳಸದಂತೆ ನಿಗವಹಿಸಬೇಕು.
ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು (iಟಿಛಿಟuಜiಟಿg ಅomಠಿosಣಚಿbಟe, ಃio-ಜegಡಿಚಿಜಚಿbಟe ಚಿಟಿಜ ಟಿoಟಿ-ತಿoveಟಿ sಚಿಛಿಞs iಡಿಡಿesಠಿeಛಿಣive oಜಿ size ಚಿಟಿಜ ಣhiಛಿಞಟಿess) ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್‌ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಫೋರ್ಕ್‌ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್‌ಬಾಕ್ಸ್‌ಗಳು, ಆಮಂತ್ರಣ ಪತ್ರಗಳು, ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್‌ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‌ಗಳನ್ನು ಬಳಸದಂತೆ ನಿಗಾವಹಿಸಬೇಕು. ಈ ನಿಯಮಗಳ ಉಲ್ಲಂಘನೆಯು ಶಿಕ್ಷಾರ್ಹ ಅಪರಾಧವಾಗಿದ್ದು, ದಂಡವನ್ನು ಸಹ ಒಳಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು!

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು! ಹಾವೇರಿ: ದಾಸರು,...

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...