ಹಾವೇರಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಹಾವೇರಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವ”ಸುತ್ತಿರುವ ಹಾವೇರಿ ಹಾಗೂ ಸವಣೂರ ನಗರದ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ೧೪ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಉಪನ್ಯಾಸಕರ ಹುದ್ದೆಗೆ ಎಂ.ಎಸ್ಸಿ ಬಿಎಡ್ ಹಾಗೂ ಕನ್ನಡ, ಆಂಗ್ಲ ಭಾಷಾ ಉಪನ್ಯಾಸಕರ ಹುದ್ದೆಗೆ ಎಂ.ಎ. ಬಿಎಡ್ ವಿದ್ಯಾರ್ಹತೆ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಆಗಸ್ಟ್ ೫ರೊಳಗಾಗಿ ಖುದ್ದಾಗಿ ಹಾವೇರಿ ಅಥವಾ ಸವಣೂರ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾವೇರಿ ಮೊ.೯೯೦೧೭೭೨೪೩೦ ಹಾಗೂ ಸವಣೂರ ಮೊ.೭೪೮೩೨೩೫೩೧೨ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.