ಬೆಳೆನಷ್ಟ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಬೆಳೆ ಪರಿಹಾರಕ್ಕೆ ಶಾಸಕ ರುದ್ರಪ್ಪ ಲಮಾಣಿ ಸೂಚನೆ

Date:

ಬೆಳೆನಷ್ಟ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಬೆಳೆ ಪರಿಹಾರಕ್ಕೆ ಶಾಸಕ ರುದ್ರಪ್ಪ ಲಮಾಣಿ
ಸೂಚನೆ
ಹಾವೇರಿ : ಜಿಲ್ಲೆಯಲ್ಲಿ ಸತತವ ಮಳೆಯಿಂದ ಪ್ರವಾಹ ಉಂಟಾಗಿದ್ದು, ಸಾಕ? ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಬೆಳೆನ? ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹೇಳಿದರು.
ಹಾವೇರಿ ನಗರದ ತಹಸೀಲ್ದಾರ ಕಾರ್ಯಾಲಯದಲ್ಲಿ ಬೆಳೆಹಾನಿ, ಮನೆ, ಜಾನುವಾರುಗಳ ಹಾನಿ ಕುರಿತ ಜರುಗಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನದ್ಯಾಂತ ಮಳೆಯಿಂದಾಗಿ ನೆರೆ ಸಂಭವಿಸಿ ಸುಮಾರು ೧,೩೯೬ ಹೇಕ್ಟರ್ ಪ್ರದೇಶದಲ್ಲಿ ಬೆಳೆಹಾನಿಯಾಗಿರುತ್ತದೆ. ತೋಟಗಾರಿಕೆ ಬೆಳೆಗಳಲ್ಲಿ ಪ್ರತಿಶತ ಶೇ.೯೦ರಷ್ಟು ಬೆಳೆ ಹಾನಿಯಾಗಿರುತ್ತದೆ. ಸಂಬಂಧಪಟ್ಟ ಅಧಿಕಾರಗಳು ಬೆಳೆ ಹಾನಿ ಪರಿಶೀಲನೆ ಮಾಡಿ ಬೆಳೆ ಹಾನಿ ಒಳಗಾದವರಿಗೆ ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ಪರಿಹಾರ ವಿತರಿಸಬೇಕು. ಪರಿಹಾರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ತಾಲೂಕಿನಲ್ಲಿ ಈ ವರೆಗೂ ೧೬೭ ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ. ಸಮೀಕ್ಷೆ ಮಾಡಿ ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಮಾರ್ಗಸೂಚಿ ಅನ್ವಯ ಕ್ರಮ ವಹಿಸಲಾಗುವುದು ಎಂದು ತಹಶೀಲ್ದಾರ್ ಜಿ ಎಸ್ ಶಂಕರ ರವರು ಸಭೆಗೆ ಮಾಹಿತಿ ನೀಡಿದರು.
ತಾಲೂಕಿನಲ್ಲಿ ಆರಂಭಿಸಿರುವ ಕಾಳಜಿಕೇಂದ್ರದಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗಬಾರದು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಸೂಕ್ತ ಮೂಲ ಸೌಕರ್ಯಗಳನ್ನು ನೀಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ನಿಯೋಜಿಸಿರುವ ಸ್ಥಳದಲ್ಲಿಯೇ ಇರಬೇಕು ಎಂದರು.
ತಹಸೀಲ್ದಾರ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿವೆ. ಇದನ್ನು ಗಂಭಿರವಾಗಿ ಪರಿಗಣಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಲ್ಲಿ ಎರಡು ಬಾರಿ ಸಭೆ ನಡೆಸಲಾಗಿವುದು. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ವಿಲೇವಾರಿಗೆ ಕ್ರಮ ವಹಿಸಬೇಕು. ಕಚೇರಿಗೆ ಬಂದಂತಹ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲದಿದ್ದರೆ ಕಚೇರಿಯ ಎಲ್ಲ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ನಗರಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್‌ಎಫ್‌ಎನ್.ಗಾಜೀಗೌಡರ, ಸವಣೂರ ಉಪ ವಿಭಾಗಾಧಿಕಾರಿ ಮಹ್ಮದ್ ಖಿಜರ್, ಕೊಟ್ರೇಶಪ್ಪ ಬಸೇಗಣ್ಣಿ, ಗ್ರಾ.ಪಂ. ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...