ವಿದ್ಯುತ್ ತಗುಲಿ ತಂದೆ-ಮಗನ ದಾರುಣ ಸಾವು

Date:

ವಿದ್ಯುತ್ ತಗುಲಿ ತಂದೆ-ಮಗನ ದಾರುಣ ಸಾವು
ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (೫೦) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (೨೬) ಎಂದು ಗುರುತಿಸಲಾಗಿದೆ.
ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಈ ರೀತಿಯ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಿ ಎಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...