ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

Date:

ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ
ಹಾವೇರಿ:ರಾಜ್ಯ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿಗೊಳಿಸದೆ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಮಾಳಗಿ, ಉಪಾಧ್ಯಕ್ಷರು ನಾಗೇಶ್ ಮಲ್ಲೋಲ, ಹಾವೇರಿ ನಗರಸಭೆಯ ಎಲ್ಲ ಹೊರಗುತ್ತಿಗೆ ಕಾರ್ಮಿಕರು ಆರೋಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಕಳೆದ ಚುನಾವಣಾ ಕಾಲಕ್ಕೆ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಆರನೇ ಗ್ಯಾರಂಟಿ ನೀಡಿತ್ತು. ಆದರೆ ಪೌರಕಾರ್ಮಿಕರಲ್ಲಿ ತಾರತಮ್ಯ ಎಸಗಿರುವ ‘ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ಕಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ನೌಕರರಿಗೆ ಗುತ್ತಿಗೆ ಪದ್ದತಿಯನ್ನು ಹೇರಿದೆ.
ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರೂ ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ.
ರಾಜ್ಯ ಸರಕಾರ ಎಚ್ಚೆತ್ತು ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು. ತಪ್ಪಿದ್ದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು, ಸ್ವಚ್ಛತೆ ಬಹಿಷ್ಕರಿಸಿ ಅನಿರ್ದಿಷ್ಟವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ

ಹಾವೇರಿ: ಹೆದ್ದಾರಿಯಲ್ಲಿ ೪೦.ಲಕ್ಷ ರೂ ದರೋಡೆ ಮಾಡಿದ್ದ ೯ ಜನರ ಬಂಧನ ಹಾವೇರಿ:...

ಸಮರ್ಪಕ ಜನಗಣತಿ ಕಾರ್ಯ ಯಶಸ್ವಿಗೆ ಸಹಕರಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ

ಸಮರ್ಪಕ ಜನಗಣತಿ ಕಾರ್ಯ ಯಶಸ್ವಿಗೆ ಸಹಕರಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ ಹಾವೇರಿ ವಾರ್ತೆ...

ಕೇಂದ್ರದ ಅನುದಾನ ಹಂಚಿಕೆ ನೀತಿಯಿಂದ ದಕ್ಷಿಣದ ರಾಜ್ಯಗಳಿಗೆ ಭಾರಿ ಅನ್ಯಾಯ : ಶಾಸಕ ಶ್ರೀನಿವಾಸ ಮಾನೆ

ಕೇಂದ್ರದ ಅನುದಾನ ಹಂಚಿಕೆ ನೀತಿಯಿಂದ ದಕ್ಷಿಣದ ರಾಜ್ಯಗಳಿಗೆ ಭಾರಿ ಅನ್ಯಾಯ :...

ನೊಂದವರ ಸಮಸ್ಯೆಗಳನ್ನು ಪ್ರಾಮಾಣಿಕತೆಯಿಂದ ಪರಿಹರಿಸುವುದು ಪೊಲೀಸರ ಕರ್ತವ್ಯ ಪ್ರಜ್ಞೆಯಾಗಿದೆ -ಸುರೇಖಾ ರಾಯ್ಕರ್

ನೊಂದವರ ಸಮಸ್ಯೆಗಳನ್ನು ಪ್ರಾಮಾಣಿಕತೆಯಿಂದ ಪರಿಹರಿಸುವುದು ಪೊಲೀಸರ ಕರ್ತವ್ಯ ಪ್ರಜ್ಞೆಯಾಗಿದೆ -ಸುರೇಖಾ...