ಅನ್ಯ ಸಮಾಜ ಎಸ್‌ಟಿ ಸೇರ್ಪಡೆಗೆ ವಿರೋಧ-ವಾಲ್ಮೀಕಿ ನಾಯಕ ಮಹಾ ಸಭಾ ಪ್ರತಿಭಟನೆ

Date:

ಹಾವೇರಿ: ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧವಾಗಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಹಾವೇರಿಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಹಾವೇರಿ ವತಿಯಿಂದ  ನೂರಾರು ಕಾರ್ಯಕರ್ತರು ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ  ಮಾತನಾಡಿ, ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸದೃಢವಾಗಿ ಮುಂದುವರೆದಿರುವ ಅನ್ಯ ಸಮಾಜವನ್ನು ಸೇರ್ಪಡೆ ಮಾಡಲು ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.
ಸಂವಿಧಾನದ ಆಶಯದಂತೆ ಹಾಲಿ ಇರುವ ಪರಿಶಿಷ್ಟ ಪಂಗಡದ ಪಟ್ಟಿಯರುವ ಜಾತಿಯ ಸಮಾಜದವರಿಗೆ ವಿವಿಧ ರೀತಿಯ ಸೌಲಭ್ಯಗಳು ಸಿಗುವಲ್ಲಿ ತುಂಬಲಾರದಷ್ಟು ಘೋರ ಅನ್ಯಾಯವಾಗುತ್ತಿದೆ. ಸಂವಿಧಾನದ ಹಿತವನ್ನು ಕಾಪಾಡುವ ಪ್ರಭುದ್ಧತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೌರವ ಪೂರ್ವಕವಾಗಿ ಈ ನಿರ್ಧಾರವನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.
ವಾಲ್ಮೀಕಿ ಸಮಾಜದ ಶಾಸಕರುಗಳಾದ  ನಾಗೇಂದ್ರ, ಕೆ.ಎನ್.ರಾಜಣ್ಣ ಇವರನ್ನು ಸಚಿವ ಸಂಪುಟದಿಂದ ಹೊರಗೆ ಹಾಕಲಾಗಿದೆ. ಸಾಲು ಸಾಲು ವಾಲ್ಮೀಕಿ ಸಮಾಜದವರನ್ನು ಹೊರಗೆ ಹಾಕಿ ವಾಲ್ಮೀಕಿ ಸಮಾಜವನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ ಒಂದರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿದ್ದಾರೆ. ರಾಜ್ಯದಲ್ಲಿ ಎಸ್ಟಿ ಸಮಾಜಕ್ಕೆ ಸೇರದೇ ಇರುವ ಅನ್ಯ ಜಾತಿಯವರು ನಕಲಿ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು ಪಡೆಯುತ್ತಿರುವ ಹಾಗೂ ಎಸ್ಟಿ ಪ್ರಮಾಣ ಪತ್ರವನ್ನು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಮೇಶ ಆನವಟ್ಟಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಮೇಶ್ ಆನವಟ್ಟಿ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ಬಡಮ್ಮನವರ್, ತಾಲೂಕ ಅಧ್ಯಕ್ಷ  ಮಾಲತೇಶ್ ರಿತ್ತಿ, ಮುಖಂಡರುಗಳಾದ ಮಲ್ಲಿಕಾರ್ಜುನ್ ಬುದಗಟ್ಟಿ, ರಾಘವೇಂದ್ರ ಬಾಸೂರ್, ನೀಲಪ್ಪ ಕನಕಪುರ, ಜಗದೀಶ್ ಕೊಂಡೆಮ್ಮನವರ್, ಕುಮಾರ್ ಅಗಸನಮಟ್ಟಿ, ಮಾರುತಿ ಕನವಳ್ಳಿ,  ಗೀತಾ ಆರ್, ಬಾಲರಾಜ್ ಹೊನ್ನನಾಯಕ್, ಶ್ರೀಕಾಂತ್ ತಳವಾರ್, ಚಂದ್ರಪ್ಪ ಕರೆಬಸಪ್ಪನವರ, ಶಿವನಗೌಡ ಪಾಟೀಲ್, ಉದಯಕುಮಾರ್ ಅಗಸನಮಟ್ಟಿ, ಚಂದ್ರಶೇಖರ ಕದರಮಂಡಲಗಿ, ರಮೇಶ್ ಯಂಕಣ್ಣನವರ, ನಾಗರಾಜ್ ಬಾಳೆಹೊಸೂರ್.,ವಿಠ್ಠಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...