ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

Date:

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ
ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

Book

ಹಾವೇರಿ: ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ “ಕಾಡುಮೇಡು” ಕೃತಿಗೆ ಹಾಗೂ ನಾಗರಾಜ ಹುಡೇದ ಅವರ “ಬೆರಗು” ಕೃತಿಗಳಿಗೆ, ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ ನೀಡುವ ೨೦೨೩ನೇ ಸಾಲಿನ “ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ” ಬಂದಿವೆ ಎಂದು ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ತಿಳಿಸಿದರು.

ಧಾರವಾಡದ ಜಿಲ್ಲಾ ಪಂಚಾಯತ ಕಾನ್ಫರೆನ್ಸ್ ಹಾಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಲ್ಲಿ ಮಾತನಾಡಿ ಅವರು, ದಕ್ಷಿಣ ಕನ್ನಡದ ನಿರ್ಮಲಾ ಸುರತ್ಕಲ್ ಅವರ ಪುಟ್ಟಿಗೆ ಸಿಟ್ಟಿಲ್ಲ, ಧಾರವಾಡದ ಲಲಿತಾ ಪಾಟೀಲರ ಗಪ್ ಚುಪ್ ಪುಸ್ತಕಗಳಿಗೂ ಕೂಡಾ 2023ನೇ ಸಾಲಿನ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ ಲಭಿಸಿವೆ ಎಂದರು.

ಈ ಪ್ರಶಸ್ತಿಯ ಜೊತೆಗೆ 2022-23 ಹಾಗೂ 2023-24ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿ, ಎಲೆಮರೆ ಕಾಯಿಯಂತಿರುವ ಪ್ರತಿಭಾವಂತ ಮಕ್ಕಳಿಗೆ ನೀಡುವ ಬಾಲ ಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿಗಳನ್ನು, ಇದೇ 16ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ಭಾಗದಲ್ಲಿರುವ ಗಾಂಧಿ ಭವನದಲ್ಲಿ ವಿತರಿಸಲಾಗುವುದು ಎಂದರು.

ಈ ಪ್ರಶಸ್ತಿಗಳು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆಯಾಗಲಿವೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದರು.

ಬಾಲ ವಿಕಾಸ ಅಕಾಡೆಮಿಯಲ್ಲಿರುವ ಅವಕಾಶ ವಂಚಿತ ಮಕ್ಕಳನ್ನು ಗುರುತಿಸಿ, ಅವರನ್ನು ನಿಸರ್ಗದ ಮಡಿಲಿಗೆ ಕರೆತರುವ ನಿಟ್ಟಿನಲ್ಲಿ ಬಾಲವಿಕಾಸ ಅಕಾಡೆಮಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ೧೫ ದಿನಗಳವರೆಗೆ ಅವರ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಸುವ ಮೂಲಕ ರಾಜ್ಯದಲ್ಲಿನ ೧೦ ಜನರ, ಮೂರು ತಂಡಗಳನ್ನಾಗಿಸಿ ಮಕ್ಕಳಿಗೆ ಹೊಸ ಆತ್ಮವಿಶ್ವಾಸ ತರುವ ವಿದೇಶದಿಂದ ಸಾಧನೆ ಮಾಡಲು ಪ್ರೇರೇಪಿಸುತ್ತದೆ. ಸಾಧಕರನ್ನು ಕರೆದು, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಪ್ರಯತ್ನ ಬಾಲವಿಕಾಸ ಅಕಾಡೆಮಿ ಮಾಡುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಅಕ್ಕಮಹಾದೇವಿ, ವಿಶೇಷ ಕರ್ತವ್ಯ ಅಧಿಕಾರಿ ಅನ್ನಪೂರ್ಣ ಸಂಗಳದ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...

10 ಕೋಟಿ ರೂ. ಗಳ ವೆಚ್ಚದಲ್ಲಿ ಕನವಳ್ಳಿ ಗ್ರಾಮದ ಅಭಿವೃದ್ಧಿ. ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ.

10 ಕೋಟಿ ರೂ. ಗಳ ವೆಚ್ಚದಲ್ಲಿ ಕನವಳ್ಳಿ ಗ್ರಾಮದ ಅಭಿವೃದ್ಧಿ. ಉಪಸಭಾಧ್ಯಕ್ಷ...