ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ನಮ್ಮೆಲರಿಗೂ ಆದರ್ಶ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

Date:

ಹಾವೇರಿ : ಕರ್ನಾಟಕದ ಭಗತ್ ಸಿಂಗ್ ಎಂದು ಕರೆಸಿಕೊಳ್ಳುವ ಹುತಾತ್ಮ ಮೈಲಾರ ಮಹಾದೇವಪ್ಪ ಅವರ ದೇಶಪ್ರೇಮ, ತ್ಯಾಗ ಮತ್ತು ಬಲಿದಾನ ನಮ್ಮೆಲ್ಲರಿಗೂ ಆದರ್ಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಹುತಾತ್ಮರ ವೀರಸೌಧದಲ್ಲಿ ಬುಧವಾರ ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಮೊಟೇಬೆನ್ನೂರು ಬಳ್ಳಾರಿ ರುದ್ರಪ್ಪ ಬಿ.ಎಡ್. ಕಾಲೇಜು ಹಾಗೂ ಟಿ.ಎಂ.ಎ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾದ ಹುತಾತ್ಮ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಅವರುಗಳು ಸ್ವಾತಂತ್ರ್ಯ ಸಂಗ್ರಾಮದಲ್ಲಿ ೧-೪-೧೯೪೩ ರಂದು ಜೀವಬಲಿದಾನ ಮಾಡಿದ ಸ್ಮರಣಾರ್ಥ ೮೩ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ೧೮೫೭ರಲ್ಲಿ ನಡೆದ ಸಿಪಾಯಿದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಮರವಾಗಿದ್ದು, ಇದರಲ್ಲಿ ಅನೇಕ ಮಹಾನ್ ನಾಯಕರುಗಳು ತಮ್ಮ ಪ್ರಾಣ ತ್ಯಾಗ ಮಾಡಿದರು. ನಂತರದ ದಿನಗಳಲ್ಲಿ ನಡೆದ ಸ್ವಾತಂತ್ರ್ಯ ಚಳುವಳಿಯಲ್ಲಿ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅದೇ ರೀತಿ ಸ್ವಾತಂತ್ರ್ಯ ಹೋರಾಟದಲ್ಲಿ ಹಾವೇರಿ ಜಿಲ್ಲೆ ಸಹ ಮುಂಚೂಣಿಯಲ್ಲಿತ್ತು. ಈ ಚಳುವಳಿಯಲ್ಲಿ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಮತ್ತು ತಿರಕಪ್ಪ ಮಡಿವಾಳ ಅವರ ಹೆಸರುಗಳು ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿವೆ. ೪೩ನೇ ವಯಸ್ಸಿನಲ್ಲಿ ಬ್ರಿಟಿ?ರ ಗುಂಡಿಗೆ ಬಲಿಯಾದ ಅವರು ದೇಶಪ್ರೇಮದ ಪ್ರತೀಕವಾಗಿದ್ದಾರೆ ಎಂದು ಬಣ್ಣಿಸಿದರು.
ಮಹಾತ್ಮಾ ಗಾಂಧೀಜಿಯವರು ೧೯೩೦ರಲ್ಲಿ ಹಮ್ಮಿಕೊಂಡಿದ್ದ ಐತಿಹಾಸಿಕ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ೭೮ ಜನರಲ್ಲಿ ಕರ್ನಾಟಕದಿಂದ ಏಕೈಕ ಪ್ರತಿನಿಧಿ ಮೈಲಾರ ಮಹದೇವಪ್ಪನವರು. ಸಾಬರಮತಿ ಆಶ್ರಮದಲ್ಲಿ ತರಬೇತಿ ಪಡೆದು ಹಾವೇರಿ ಜಿಲ್ಲೆಯ ಹೊಸರಿತ್ತಿ ಹಾಗೂ ಕೊರಡೂರನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು ಅವರು ಹೋರಾಟ ನಡಿಸಿದ್ದರು. ೧೯೪೧ರಲ್ಲಿ ಸೆರೆಮನೆ ವಾಸ ಅನುಭವಿಸಿದ್ದರೂ ಹಾಗೂ ಮರಳಿ ಬಂದು ಬ್ರಿಟಿ?ರ ವಿರುದ್ಧ ಹೋರಾಟವನ್ನು ಮತ್ತ? ತೀವ್ರಗೊಳಿಸಿದ ಧೀಮಂತ ವೈಕ್ತಿತ್ವ ಅವರದು ಎಂದು ಹೇಳಿದರು.
ಮೈಲಾರರ ಹೆಸರಿನಲ್ಲಿ ಸ್ಥಾಪಿತವಾಗಿರುವ ಟ್ರಸ್ಟ್ ಮೂಲಕ ಅನೇಕ ಪುಸ್ತಕಗಳು ಪ್ರಕಟವಾಗಿವೆ. ವೀರಸೌಧದ ಆವರಣದಲ್ಲಿ ಮೈಲಾರರ ಜೀವನ ಚಿತ್ರಣ ನೀಡುವ ಸುಸಜ್ಜಿತ ಸಂಗ್ರಹಾಲಯ ನಿರ್ಮಿಸುವ ಚಿಂತನೆ ಇದೆ. ಕೊರಡೂರು ಸೇವಾಶ್ರಮವನ್ನು ನವೀಕರಿಸಲಾಗಿದ್ದು, ಈ ಬಾರಿ ಜೂನ್ ೮ರಂದು ಅವರ ಜನ್ಮದಿನವನ್ನು ಸಡಗರದಿಂದ ಆಚರಿಸಲಾಗುವುದು ಎಂದು ಅವರು ಇಂದಿನ ಯುವಪೀಳಿಗೆ ಆಧುನೀಕರಣ ಮತ್ತು ಪಾಶ್ಚ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗದೇ ಇಂತಹ ಮಹಾನ್ ನಾಯಕ ಜೀವನ ಚರಿತ್ರೆ ಓದಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಯುವಕರಿಗೆ ಪರಿಚಯಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಮಾತನಾಡಿ, ಮಹಾನ್ ವ್ಯಕ್ತಿ ಮೈಲಾರ ಮಹಾದೇವಪ್ಪನವರು. ಅವರ ತ್ಯಾಗ, ಧೈರ್ಯ ಮತ್ತು ದೇಶಭಕ್ತಿ ಯುವಪೀಳಿಗೆಗೆ ಆದರ್ಶವಾಗಬೇಕು. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಹರಿಹರದ ಹಿರಿಯ ಸಾಹಿತಿ ಪ್ರೊ. ಲಿಂಗರಾಜ ಕಮ್ಮಾರ ಅವರು ಮೈಲಾರ ಮಹಾದೇವಪ್ಪನವರ ತ್ಯಾಗ, ಧೈರ್ಯ ಮತ್ತು ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನು?ನ ಸಮಿತಿಯ ಅಧ್ಯಕ್ಷ ಎಂ.ಎಂ. ಮೈದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳಾ ಜೈನ್, ಸಾಹಿತಿ ಸತೀಶ ಕುಲಕರ್ಣಿ, ಎಚ್.ಎಸ್.ಮಹಾದೇವ, ವಿ.ಎನ್.ತಿಪ್ಪನಗೌಡ, ನಾಗೇಂದ್ರ ಕಟಕೋಳ, ಟಿ.ಎಂ.ಎ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಕೆ. ಪ್ರಸಾದಿಮಠ, ಬಳ್ಳಾರಿ ರುದ್ರಪ್ಪ ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ ಹಾವೇರಿ: ಕನ್ನಡ ಮತ್ತು ಸಂಸ್ಕೃತಿ...

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ ಗಾಯ

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ...

ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ ದಾನಮ್ಮನವರ

  ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ...