ಗ್ರೂಪ್ಇನ್ಸೂರೆನ್ಸ್ ಮಂಜೂರಿಗೆ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಎಸ್ಡಿಎ ಅಕ್ಕಮ್ಮ
ಹಾವೇರಿ: ಗ್ರೂಪ್ ಇನ್ಸೂರನ್ಸ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ದ್ವಿತೀಯ ದರ್ಜೆ ಸಹಾಯಕಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಹಾವೇರಿ ಜಿಲ್ಲಾಡಳಿತ ಕಚೇರಿಯಲ್ಲಿನ ಸಹಕಾರ ಸಂಘಗಳ ಉಪನಿಬಂಧಕ ಕಚೇರಿಯ ಎಸ್ ಡಿ ಎ ಅಕ್ಕಮ್ಮ ಬಿದರೇರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ದ್ವಿತೀಯ ದರ್ಜೆ ಸಹಾಯಕಿ.
ಗ್ರೂಪ್ ಇನ್ಸೂರನ್ಸ್ ಮಂಜೂರು ಮಾಡಿಕೊಡಲು ಮೂರು ಸಾವಿರ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಅಕ್ಕಮ್ಮ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಅಕ್ಕಮ್ಮಳನ್ನು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ದೇವಗಿರಿ ಗ್ರಾಮದ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಅಕ್ಕಮ್ಮನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಕ್ಕಮ್ಮ ಬಿದರೇರ್ ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹದೇವ ಜೇಕಿನಕಟ್ಟಿ ಎಂಬುವರು ವಯೋ ನಿವೃತ್ತಿಯಾಗಿದ್ದು, ಅವರಿಗೆ ಗುಂಪು ವಿಮೆ ಮೊತ್ತ ಬಿಲ್ ಮಾಡಿಕೊಡಲು ಅಕ್ಕಮ್ಮ ೩ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಸ್ವೀಕಾರ ಮಾಡುತ್ತಿದ್ದ ವೇಳೆ ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ಟ್ರ್ಯಾಪ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಅಕ್ಕಮ್ಮನನ್ನು ನ್ಯಾಯಾಂಗ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ಒಪ್ಪಿಸಿದ್ದಾರೆ.