
ಸಹಕಾರಿ ಕ್ಷೇತ್ರದ ಸಾಧನೆಗೆ ದಾಕ್ಷಾಯಣಿ ಗಾಣಿಗೇರ ಅವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ ಪ್ರದಾನ
ಹಾವೇರಿ: ರಾಜ್ಯ ಸರ್ಕಾರ ನೀಡುವ ೨೦೨೬ನೇ ಸಾಲಿನ ಪ್ರತಿಷ್ಠಿತ ‘ಸಹಕಾರಿ ರತ್ನ’ ಪ್ರಶಸ್ತಿಯನ್ನು ಬೆಂಗಳೂರಲ್ಲಿ ಶನಿವಾರ ನಡೆದ ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಹಾವೇರಿಯ ಪ್ರಿಯದರ್ಶಿನಿ ಮಹಿಳಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷೆ ದಾಕ್ಷಾಯಣಿ ಗಾಣಿಗೇರ ಅವರಿಗೆ ಪ್ರದಾನ ಮಾಡಿದರು.
ದಾಕ್ಷಾಯಣಿ ಗಾಣಿಗೇರ ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಕಾಲದಿಂದ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ನೀಡಿರುವ ಕೊಡುಗೆ ಹಾಗೂ ಸಹಕಾರಿ ಚಳವಳಿಯ ಬಲವರ್ಧನೆಗೆ ಶ್ರಮಿಸಿರುವುದನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಹಾವೇರಿ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಕಾರ್ಯವೈಖರಿ ಹಾಗೂ ಸೇವಾ ಮನೋಭಾವದಿಂದ ಗುರುತಿಸಿಕೊಂಡಿರುವ ದಾಕ್ಷಾಯಣಿ ಗಾಣಿಗೇರ ಅವರಿಗೆ ರಾಜ್ಯಮಟ್ಟದ ಗೌರವ ಲಭಿಸಿರುವುದು ಜಿಲ್ಲೆಯ ಮಹಿಳಾ ವಲಯ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಂತಸ ಮತ್ತು ಹೆಮ್ಮೆಗೆ ಕಾರಣವಾಗಿದೆ. ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

