ಏಡ್ಸ್ ನಿಯಂತ್ರಣದಲ್ಲಿ ಹಾವೇರಿ ಜಿಲ್ಲೆಗೆ ರಾಷ್ಟ್ರಮಟ್ಟದ ಗೌರವ

Date:

ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ

ಹಾವೇರಿ: ಎಚ್‌ಐವಿ/ಏಡ್ಸ್ ನಿಯಂತ್ರಣ ಹಾಗೂ ಜಾಗೃತಿಯಲ್ಲಿ ಮಹತ್ವದ ಸಾಧನೆ ಮಾಡಿರುವ ಹಾವೇರಿ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ರಾಷ್ಟ್ರಮಟ್ಟದ ಗೌರವ ದೊರೆತಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (NACO) ವತಿಯಿಂದ ಹಾವೇರಿ ಜಿಲ್ಲೆ ‘ಸುರಕ್ಷಿತ್’ (Surakshit) ಸ್ಥಾನಮಾನ ಪಡೆದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ಏಡ್ಸ್ ಸುರಕ್ಷಾ ಉಪಕ್ರಮದಡಿ ನಿಗದಿಪಡಿಸಿರುವ 95-95-95 ಗುರಿಗಳನ್ನು ಸಾಧಿಸಿರುವ ಹಾವೇರಿ ಜಿಲ್ಲೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತು ಶರ್ಮಾ (ಐಆರ್‌ಎಸ್) ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಾಧನೆಗಾಗಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮನ್ನವರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೈಗೊಂಡ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, 2026ರ ಡಿಸೆಂಬರ್ 1ರಂದು ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯವರನ್ನು ಆಹ್ವಾನಿಸಿದ್ದಾರೆ.

ಎಚ್‌ಐವಿ ಸೋಂಕಿನಿಂದ ಮೃತಪಟ್ಟವರ ಸ್ಮರಣಾರ್ಥ ಹಾಗೂ ಎಚ್‌ಐವಿ ಸೋಂಕಿತರಿಗಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೈಗೊಂಡಿರುವ ಕಾರ್ಯಗಳನ್ನು ಗುರುತಿಸಿ, ಹಾವೇರಿ ಜಿಲ್ಲೆಯನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಉದ್ದೇಶಿಸಲಾಗಿದೆ.

ಜಿಲ್ಲಾ ಶಸ್ತ್ರಚಿಕಿತ್ಸಕರು, ಮುಖ್ಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳನ್ನೊಳಗೊಂಡ ತಂಡದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪತ್ರದಲ್ಲಿ ತಿಳಿಸಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ನವೆಂಬರ್ 18ರಂದು ಈ ಕುರಿತು ಅಧಿಕೃತ ಪತ್ರ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಬೆಡ್ತಿ–ವರದಾ ನದಿ ಜೋಡಣೆ ಯೋಜನೆಗೆ ತಜ್ಞರ ಅಂತಿಮ ವರದಿ ಸ್ವಾಗತಾರ್ಹ’:ಆನಂದಸ್ವಾಮಿ ಗಡ್ಡದೇವರಮಠ

  'ಬೆಡ್ತಿ–ವರದಾ ನದಿ ಜೋಡಣೆ ಯೋಜನೆಗೆ ತಜ್ಞರ ಅಂತಿಮ ವರದಿ ಸ್ವಾಗತಾರ್ಹ':ಆನಂದಸ್ವಾಮಿ ಗಡ್ಡದೇವರಮಠ ಯೋಜನೆಗೆ...

ಬಸವಣ್ಣನವರ ಚರಿತ್ರೆ ಮತ್ತು ಚಾರಿತ್ರ್ಯವನ್ನು ಯಾರೂ ಅಳಸಿ ಹಾಕಲು ಸಾಧ್ಯವಿಲ್ಲ

ಬಸವಣ್ಣನವರ ಚರಿತ್ರೆ ಮತ್ತು ಚಾರಿತ್ರ್ಯವನ್ನು ಯಾರೂ ಅಳಸಿ ಹಾಕಲು ಸಾಧ್ಯವಿಲ್ಲ ಹಾವೇರಿ: ’ಬಸವ...